ಸಿನಿಮಾ-ಸಮಾಜಮುಖಿ ಕೆಲಸಗಳಿಗೆ ಮನ್ನಣೆ: ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್

ಕನ್ನಡದ ವರನಟ ಡಾ.ರಾಜ್ ಕುಮಾರ್(Dr.Rajkumar) ಅವರ ಕಿರಿಯ ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Power star Puneet Rajkumar) ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.

Published: 13th March 2022 12:49 PM  |   Last Updated: 13th March 2022 04:42 PM   |  A+A-


Puneet Rajkumar

ಪುನೀತ್ ರಾಜ್ ಕುಮಾರ್

Online Desk

ಮೈಸೂರು: ಕನ್ನಡದ ವರನಟ ಡಾ.ರಾಜ್ ಕುಮಾರ್(Dr.Rajkumar) ಅವರ ಕಿರಿಯ ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Power star Puneet Rajkumar) ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಳೆದ ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು ಅವರ ಕುಟುಂಬ ವರ್ಗಕ್ಕೆ ರಾಜ್ಯ-ಪರರಾಜ್ಯಗಳು, ಪರ ದೇಶಗಳ ಅಭಿಮಾನಿಗಳು, ಕುಟುಂಬವರ್ಗ, ಬಂಧು-ಮಿತ್ರರಿಗೆ ತೀವ್ರ ದುಃಖವನ್ನುಂಟುಮಾಡಿತ್ತು. ಅಂತ್ಯಸಂಸ್ಕಾರಕ್ಕೆ ಮುನ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇರಿಸಲಾಗಿದ್ದ ಅವರ ಪಾರ್ಥಿವ ಶರೀರವನ್ನು ಲಕ್ಷಾಂತರ ಮಂದಿ ದರ್ಶನ ಮಾಡಿದ್ದರು.

ಇದನ್ನೂ ಓದಿ: ಜೇಮ್ಸ್ ಚಿತ್ರದ ಎರಡನೇ ವಿಡಿಯೋ ಸಾಂಗ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ್!

ಇಂದಿಗೂ ಅವರ ಅಗಲುವಿಕೆ ಎಲ್ಲರಿಗೂ ಹೇಳತೀರದ ನೋವನ್ನುಂಟುಮಾಡುತ್ತಿದೆ. ಕನ್ನಡ ಸಿನಿಮಾ ಕ್ಷೇತ್ರಕ್ಕೆ ಮತ್ತು ಅವರ ಸಮಾಜಮುಖಿ ಕೆಲಸಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಗೌರವ ಘೋಷಿಸಿದ್ದು, ಸಮಾರಂಭ ನಡೆಯಬೇಕಿದೆ.ಸಿನಿಮಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಪ್ಪು ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ವಿಶ್ವಾದ್ಯಂತ 4 ಸಾವಿರ ಥಿಯೇಟರ್ ಗಳಲ್ಲಿ ಜೇಮ್ಸ್ ಪ್ರದರ್ಶನ: ಮೆಜೆಸ್ಟಿಕ್ ನಲ್ಲಿ 81 ಅಡಿ ಅಪ್ಪು ಕಟೌಟ್

ಇದೀಗ ಮೈಸೂರು ವಿಶ್ವವಿದ್ಯಾಲಯ ಪುನೀತ್ ಅವರ ಸಿನಿಮಾ ಮತ್ತು ಸಾಮಾಜಿಕ ಕಾರ್ಯಗಳನ್ನು ಮೆಚ್ಚಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿದ್ದು ಇದೇ ತಿಂಗಳ 22ರಂದು ನಡೆಯಲಿರುವ ವಿಶ್ವ ವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ವಿವಿ ಕುಲಪತಿ ಘೋಷಿಸಿದ್ದಾರೆ. 


Stay up to date on all the latest ರಾಜ್ಯ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp