ಹಿಜಾಬ್ ಧರಿಸಲು ಹೈಕೋರ್ಟ್ ನಕಾರ: ನಾಳೆ ಕರ್ನಾಟಕ ಬಂದ್ ಗೆ ಮುಸ್ಲಿಂ ಮುಖಂಡರು ಕರೆ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ, ವಸ್ತ್ರಸಂಹಿತೆಯನ್ನು ಪ್ರಶ್ನಿಸುವ ಹಕ್ಕು ಸಂವಿಧಾನದಲ್ಲಿ ಇಲ್ಲ, ಹಿಜಾಬ್ (Hijab row) ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಮುಸ್ಲಿಂ ವಿದ್ಯಾರ್ಥಿನಿಯರು, ಮುಸ್ಲಿಂಪರ ಸಂಘಟನೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
Published: 16th March 2022 01:59 PM | Last Updated: 16th March 2022 02:38 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ, ವಸ್ತ್ರಸಂಹಿತೆಯನ್ನು ಪ್ರಶ್ನಿಸುವ ಹಕ್ಕು ಸಂವಿಧಾನದಲ್ಲಿ ಇಲ್ಲ, ಹಿಜಾಬ್ (Hijab row) ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಮುಸ್ಲಿಂ ವಿದ್ಯಾರ್ಥಿನಿಯರು, ಮುಸ್ಲಿಂಪರ ಸಂಘಟನೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
ಹೈಕೋರ್ಟ್ ನೀಡಿರುವ ತೀರ್ಪು ಸರಿಯಲ್ಲ, ಮುಸ್ಲಿಂ ಹೆಣ್ಣುಮಕ್ಕಳ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ (March 17) ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ತರಗತಿಯೊಳಗೆ ಹಿಜಾಬ್ ಧರಿಸಲು ನಿಷೇಧ: ಹೋಳಿ ಹಬ್ಬ ನಂತರ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.