ನಟ ಪುನಿತ್ ರಾಜಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿ, ಮಾರ್ಚ್ 20ರಂದು ಸಿಎಂ ಬೊಮ್ಮಾಯಿ ಪ್ರದಾನ
ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಪ್ರಚಾರ ನೀಡಿದ್ದ ನಟ ಪುನೀತ್ ರಾಜ್ಕುಮಾರ್ ಅವರಿಗೆ ಈ ವರ್ಷದ ಸಹಕಾರ ರತ್ನ ಪ್ರಶಸ್ತಿ...
Published: 19th March 2022 12:49 AM | Last Updated: 19th March 2022 01:04 PM | A+A A-

ಪುನೀತ್ ರಾಜಕುಮಾರ್
ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಪ್ರಚಾರ ನೀಡಿದ್ದ ನಟ ಪುನೀತ್ ರಾಜ್ಕುಮಾರ್ ಅವರಿಗೆ ಈ ವರ್ಷದ ಸಹಕಾರ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಮಾರ್ಚ್ 20 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಸಹಕಾರ ಸಪ್ತಾಾಹ ಆಚರಣೆ ವೇಳೆಯಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ಕೊರೋನಾ ಕಾರಣದಿಂದಾಗಿ ಕೊಡುವುದಕ್ಕೆ ಆಗಿರಲಿಲ್ಲ. ಹೀಗಾಗಿ ಈ ಬಾರಿ ಸಹಕಾರ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಪ್ರತಿವರ್ಷ ಪ್ರಶಸ್ತಿಗೆ ಉತ್ತಮ ಸಹಕಾರ ಸಂಘ,(ಬೆಸ್ಟ್ ಕೋಪರೇಟೀವ್ ಸೊಸೈಟಿ) ಉತ್ತಮ ಸಹಕಾರ ಬ್ಯಾಂಕ್ (ಬೆಸ್ಟ್ ಕೋಪರೇಟೀವ್ ಬ್ಯಾಂಕ್) ಆಯ್ಕೆ ಮಾಡಲಾಗುತ್ತದೆ. ಈ ಭಾರಿ ಸಹಕಾರ ರತ್ನ ಪ್ರಶಸ್ತಿ ಕೊಡಲಾಗುತ್ತದೆ. ಪ್ರಶಸ್ತಿಗೆ ರಾಜ್ಯದಲ್ಲಿ 100 ಸಂಸ್ಥೆಗಳಿಂದ ಅರ್ಜಿಗಳು ಬಂದಿವೆ. ಅವುಗಳಲ್ಲಿ ಉತ್ತಮ ಸಹಕಾರ ಸಂಘ ಮತ್ತು ಬ್ಯಾಂಕ್ಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಭಾನುವಾರ ಮಾರ್ಚ್ 20 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಅದರ ಜೊತೆ ಸ್ತ್ರೀ ಶಕ್ತಿ ಸಂಘಗಳಿಗೆ ಸಹಾಯ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಾಗಿ 20 ಕೋಟಿ ಹಣವನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಇದನ್ನು ಓದಿ: 1ನೇ ದಿನದ ಕಲೆಕ್ಷನ್: ಕೆಜಿಎಫ್ ಹಿಂದಿಕ್ಕಿ ಸಾರ್ವಕಾಲಿಕ ದಾಖಲೆ ಬರೆದ ಪುನೀತ್'ರ ಜೇಮ್ಸ್ ಚಿತ್ರ?
ಈ ವರ್ಷ ನಮ್ಮ ನಂದಿನಿ ಉತ್ಪನ್ನಗಳಿಗೆ ಪ್ರಚಾರ ನೀಡಿ, ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಲು ಸಹಕಾರ ನೀಡಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಚಿವರು ಹೇಳಿದರು.
ಇನ್ನು ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದವರಿಗೆ ನೆರವು ನೀಡಲು ಆಯಾ ಡಿಸಿಸಿ ಬ್ಯಾಾಂಕ್ಗಳಿಗೆ ಸೂಚಿಸಿದ್ದೇವೆ. ಬ್ಯಾಂಕ್ ಲಾಭಾಂಶದಲ್ಲಿ ಪರಿಹಾರ ಕೊಡುವಂತೆ ಹೇಳಿದ್ದೇವೆ. ಜಾರ್ಖಂಡ್ ಮತ್ತು ಕೇರಳದಲ್ಲಿ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ವಿಲೀನ ಮಾಡಲಾಗಿದೆ. ಈ ಬಗ್ಗೆ ನಮ್ಮ ರಾಜ್ಯದಲ್ಲಿಯೂ ಒಂದು ಹಂತದ ಸಭೆ ನಡೆಸಲಾಗಿದೆ. ರಾಜ್ಯದ ಅಧಿಕಾರಿಗಳು ಕೇರಳ, ಜಾರ್ಖಂಡ್ ಗೆ ಭೇಟಿ ನೀಡಿ ಅಧ್ಯಯನ ಮಾಡಿ ವರದಿ ಸಲ್ಲಿಕೆ ಮಾಡಿದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ತುಮಕೂರಿನ ಸಿದ್ದಗಂಗಾಮಠಕ್ಕೆ ಬರುವವರಿದ್ದಾರೆ. ಅವರು ಕೂಡ ಸಹಕಾರ ಸಚಿವರು. ಅವರು ಬಂದಾಗಲೇ ಕಾರ್ಯಕ್ರಮ ಮಾಡಬಹುದಿತ್ತು. ಆದರೆ ಈ ಕಾರ್ಯಕ್ರಮದ ದಿನಾಂಕ ಮೊದಲೇ ನಿಗದಿ ಮಾಡಲಾಗಿತ್ತು. ಅವರು ಬಂದಾಗ ಮತ್ತೊಂದು ಕಾರ್ಯಕ್ರಮ ಮಾಡಲಾಗುವುದು ಎಂದು ಸೋಮಶೇಖರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಸಹ ಹಾಜರಿದ್ದರು.