ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ
ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
Published: 21st March 2022 03:37 PM | Last Updated: 21st March 2022 03:37 PM | A+A A-

ಮೃತ ಅಕ್ಷಯಾ
ಬೆಂಗಳೂರು: ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಮಳೆ ಬಿದ್ದಿದ್ದರಿಂದ ಹೆಬ್ಬಾಳದ ಫ್ಲೈ ಓವರ್ ನ ಅಂಡರ್ ಪಾಸ್ ನಲ್ಲಿ ನೀರು ತುಂಬಿತ್ತು. ಹೀಗಾಗಿ ಮಕ್ಕಳು ಅಂಡರ್ ಪಾಸ್ ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು.
ಇನ್ನು ಮೃತ ಬಾಲಕಿ ಹಾಗೂ ಮಹಿಳೆ ಇಬ್ಬರು ವಿದ್ಯಾರ್ಥಿಗಳು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿ 15 ವರ್ಷದ ಅಕ್ಷಯಾ ದೇಹ ಛಿದ್ರವಾಗಿತ್ತು. ಇನ್ನು ಆ್ಯಂಬುಲೆನ್ಸ್ ಮೂಲಕ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದರಿಂದ ಜನರು ರಸ್ತೆಗೆ ಇಳಿಯುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಬಿಬಿಎಂಪಿಗೆ ಮಾಹಿತಿ ನೀಡಿದ್ದು ಅಂಡರ್ ಪಾಸ್ ನಲ್ಲಿ ತುಂಬಿರುವನ್ನು ನೀರನ್ನು ತೆರವುಗೊಳಿಸುವಂತೆ ಸೂಚಿಸಿದ್ದರು. ಆದರೆ ಬಿಬಿಎಂಪಿ ನಿರ್ಲಕ್ಷ್ಯವಹಿಸಿದ್ದು ಇದೀಗ ಬಾಲಕಿಯ ಸಾವಿಗೆ ಕಾರಣವಾಗಿದೆ.
ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಆರ್ ಟಿ ನಗರ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.