ಸರ್ಕಾರದ ಶೇ.90 ಬಂಡವಾಳದೊಂದಿಗೆ ಪ್ರತಿ ತಾಲೂಕಿನಲ್ಲೂ ಸ್ತ್ರೀ ಸಹಕಾರ ಸಂಘ ಪ್ರಾರಂಭಿಸಲು ಚಿಂತನೆ: ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರವು ಪ್ರತಿ ತಾಲ್ಲೂಕಿನಲ್ಲಿ ಸರ್ಕಾರದ ಶೇ 90 ರಷ್ಟು ಷೇರು ಬಂಡವಾಳದೊಂದಿಗೆ ವಿವಿಧೋದ್ದೇಶ ಮಹಿಳಾ ಸಹಕಾರ ಸಂಘಗಳ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.
Published: 21st March 2022 09:24 AM | Last Updated: 21st March 2022 10:58 AM | A+A A-

ಬೆಂಗಳೂರಿನಲ್ಲಿ ಶನಿವಾರ ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು..
ಬೆಂಗಳೂರು: ರಾಜ್ಯ ಸರ್ಕಾರವು ಪ್ರತಿ ತಾಲ್ಲೂಕಿನಲ್ಲಿ ಸರ್ಕಾರದ ಶೇ 90 ರಷ್ಟು ಷೇರು ಬಂಡವಾಳದೊಂದಿಗೆ ವಿವಿಧೋದ್ದೇಶ ಮಹಿಳಾ ಸಹಕಾರ ಸಂಘಗಳ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.
ಸಹಕಾರ ಇಲಾಖೆಯು ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ, ಸಹಕಾರಿ ಕ್ಷೇತ್ರದ 60 ಧುರೀಣರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಇದನ್ನೂ ಓದಿ: ಸಂಚಾರಿ ನಿಯಮ ಗಾಳಿಗೆ ತೂರಿದವರ ಲೈಸೆನ್ಸ್ ರದ್ದು: ಸಿಎಂ ಬೊಮ್ಮಾಯಿ ಎಚ್ಚರಿಕೆ
ಕಾರ್ಮಿಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರೆ ಮಾತ್ರ ಸಹಕಾರಿ ಕ್ಷೇತ್ರ ಯಶಸ್ವಿಯಾಗುತ್ತದೆ. ಹೀಗಾಗಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜನರನ್ನು ವಿವಿಧ ಸಹಕಾರಿ ಸಂಘಗಳ ಸದಸ್ಯರಾಗಲು ಪ್ರೋತ್ಸಾಹಿಸಲು ಸರ್ಕಾರವು ಸದಸ್ಯತ್ವ ಶುಲ್ಕವನ್ನು ಭರಿಸುತ್ತದೆ. ರಾಜ್ಯದ ತಲಾ ಆದಾಯದ ಹೆಚ್ಚಳ ಮತ್ತು ರಾಜ್ಯದ ಆರ್ಥಿಕತೆಯ ಬೆಳವಣಿಗೆಗೆ ಮಹಿಳೆಯರು ಕೊಡುಗೆ ನೀಡುತ್ತಿದ್ದಾರೆ. ಈ ಕ್ಷೇತ್ರ ಬೆಳೆದರೆ ಕರ್ನಾಟಕ ನಂಬರ್ ಒನ್ ಆಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹಾಲು ಉತ್ಪಾದನೆಯ ಸಹಕಾರ ಸಂಘದ ಒಂದರಲ್ಲೇ ವಾರ್ಷಿಕ 36 ಸಾವಿರ ಕೋಟಿ ವಹಿವಾಟು ನಡೆಯುತ್ತದೆ. ಇಂದು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ದೀರ್ಘಕಾಲ ಹಾಲು ಕೆಡದಂತೆ ಸಂಗ್ರಹಿಸಲು, ಅದರಿಂದ ಹೊಸ ಉತ್ಪನ್ನಗಳನ್ನು ತಯಾರಿಸಲು ಅವಕಾಶವಿದೆ. ಇದಕ್ಕೆ ಪ್ರೋತ್ಸಾಹ ನೀಡಲು ರೂ.100 ಕೋಟಿ ವೆಚ್ಚದಲ್ಲಿ ಕ್ಷೀರ ಸಮೃದ್ದಿ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸಿ ಬಜೆಟ್ ನಲ್ಲೂ ಘೋಷಿಸಲಾಗಿದೆ. ಅತಿ ಶೀಘ್ರದಲ್ಲೇ ಇದಕ್ಕೆ ಕಾರ್ಯಾದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.