ಅವ್ಯವಹಾರದಲ್ಲಿ ತೊಡಗಿರುವ ಆರೋಪ: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ
ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
Published: 22nd March 2022 08:13 AM | Last Updated: 22nd March 2022 01:08 PM | A+A A-

ಎಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದು.
ಬೆಂಗಳೂರು: ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್'ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ.
Karnataka | Anti Corruption Bureau is conducting raids on nine middlemen/agents in Bengaluru who are suspected of influencing public servants. They are suspected of being involved in the malpractice of the Bangalore Development Authority. Further details awaited. pic.twitter.com/pNAzmji88o
— ANI (@ANI) March 22, 2022
ಚಾಮರಾಜಪೇಟೆಯ ಬಿ.ಎನ್.ರಘು, ಆರ್'ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ.
ಇದನ್ನೂ ಓದಿ: 11 ಸ್ಥಳಗಳಲ್ಲಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: 200 ಅಧಿಕಾರಿಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು
ಈ ಹಿಂದೆ ಬಿಡಿಎ ಕಚೇರಿಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಹಲವು ಅಕ್ರಮಗಳನ್ನು ಪತ್ತೆಮಾಡಿದ್ದರು. ಆ ಪ್ರಕರಣದ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರದ ಕುರಿತು ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿರುವ ತನಿಖಾ ಸಂಸ್ಥೆ, ಕಾರ್ಯಾಚರಣೆ ನಡೆಸುತ್ತಿದೆ.