ತಮಿಳು ನಾಡಿಗೆ ಕಾವೇರಿ ನೀರು ವಿಷಯ ರಾಜಕೀಯಕ್ಕೆ ದಾಳ: ಸಿಎಂ ಬಸವರಾಜ ಬೊಮ್ಮಾಯಿ

ತಮಿಳು ನಾಡಿನವರಿಗೆ ಕಾವೇರಿ ನೀರು ರಾಜಕೀಯಕ್ಕೆ ದಾಳ, ಮೇಕೆದಾಟು ಯೋಜನೆಗೆ ತಕರಾರು ಮಾಡುವ ಕೆಲಸ ಮಾಡುತ್ತಿದ್ದಾರೆ, ಯೋಜನೆಗೆ ಆಕ್ಷೇಪಿಸಿ ತಮಿಳು ನಾಡು ಸರ್ಕಾರ ಮಾಡುತ್ತಿರುವ ನಿರ್ಣಯಗಳಿಗೆ ಬೆಲೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Published: 22nd March 2022 11:52 AM  |   Last Updated: 22nd March 2022 01:19 PM   |  A+A-


CM Basavaraja Bommai

ಸಿಎಂ ಬಸವರಾಜ ಬೊಮ್ಮಾಯಿ

Online Desk

ಬೆಂಗಳೂರು: ತಮಿಳು ನಾಡಿನವರಿಗೆ ಕಾವೇರಿ ನೀರು ರಾಜಕೀಯಕ್ಕೆ ದಾಳ, ಮೇಕೆದಾಟು ಯೋಜನೆಗೆ ತಕರಾರು ಮಾಡುವ ಕೆಲಸ ಮಾಡುತ್ತಿದ್ದಾರೆ, ಯೋಜನೆಗೆ ಆಕ್ಷೇಪಿಸಿ ತಮಿಳು ನಾಡು ಸರ್ಕಾರ ಮಾಡುತ್ತಿರುವ ನಿರ್ಣಯಗಳಿಗೆ ಬೆಲೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾವೇರಿ ನೀರಿಗಾಗಿ ತಮಿಳು ನಾಡಿನ ತಕರಾರು ಇವತ್ತಿನದ್ದಲ್ಲ, ಸ್ವಾತಂತ್ರ್ಯ ಬಂದಾಗಿನಿಂದಲೂ ಕಾವೇರಿ ನೀರಿನ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿದ್ದಾರೆ. ನ್ಯಾಯಾಧೀಕರಣ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರಿನ ಹಂಚಿಕೆ ಉಸ್ತುವಾರಿ ನೋಡಿಕೊಳ್ಳಲು ಕಾವೇರಿ ನಿರ್ವಹಣಾ ಪ್ರಾಧಿಕಾರವಿದೆ. ಅದರ ಪ್ರಕಾರ ನೀರು ಹಂಚಿಕೆಯಾಗುತ್ತಿದ್ದರೂ ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ ನದಿ ನೀರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅವರ ತಕರಾರು ಖಂಡನೀಯ ಎಂದರು.

ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದ್ದಾರೆ. ಆದರೆ ತಮಿಳುನಾಡು ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಕಾನೂನಿನ ಪ್ರಕಾರ ಯಾವುದೇ ಬೆಲೆ ಇಲ್ಲ.. ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿವೆ. ಇದು ರಾಜಕೀಯ ತಂತ್ರವಷ್ಟೇ ಎಂದರು.

ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದರು.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ: ರಾಜ್ಯ ಸರ್ಕಾರದಿಂದ ತೀವ್ರ ವಿರೋಧ

ಇದೇ 25ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗುವ ಕುರಿತು ಇಂದು ಸಾಯಂಕಾಲ ತೀರ್ಮಾನಿಸುತ್ತೇನೆ ಎಂದು ಹೇಳಿದರು. 

ಬೆಳಗಾವಿ ವಿಚಾರ ಒಂದು ರಾಜಕೀಯ ಸ್ಟಂಟ್: ಮಹಾರಾಷ್ಟ್ರ ಸಂಸದ ಸಂಜಯ್ ರಾವತ್ ಮತ್ತೆ ಬೆಳಗಾವಿ ವಿಚಾರವನ್ನು ಕೆದಕಿದ್ದಾರೆ. ಬೆಳಗಾವಿ ಫೈಲ್ಸ್ ಹಣೆಬರಹದ ಟ್ವೀಟ್ ನಲ್ಲಿ ಅವರು, ಮರಾಠಿ ಭಾಷಿಕರ ಮೇಲೆ ಬೆಳಗಾವಿಯಲ್ಲಿ ಅನ್ಯಾಯ ಆಗುತ್ತಿದೆ ಎಂದು ಕಾರ್ಟೂನ್ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ.

ಶಿವಸೇನೆ ನಾಯಕ ಸಂಜಯ ರಾವತ್ ಅವರ ‘ಬೆಳಗಾವಿ ಫೈಲ್ಸ್’ ಬರಬೇಕು… ಅಲ್ಲಿಯೂ ಅನೇಕ ಘಟನೆಗಳು ನಡೆದಿವೆ ಎಂದು ಆರೋಪಿಸಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಇಂದು ಉತ್ತರಿಸಿದ ಸಿಎಂ, ಸಮಸ್ಯೆಗಳ ದಿಕ್ಕನ್ನು ಬದಲಾಯಿಸುವ ಸಂಬಂಧ ಸಂಜಯ್ ರಾವತ್ ಈ ಟ್ವೀಟ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿ ವಿಷಯದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ. 1956ರಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ. ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Stay up to date on all the latest ರಾಜ್ಯ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Suresh

    Allow all growing citizens know our epics.
    6 months ago reply
flipboard facebook twitter whatsapp