ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಅಪ್ಪ-ಮಗಳು ಸಾವು: ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು 52 ವರ್ಷದ ವ್ಯಕ್ತಿ ಮತ್ತು ಅವರ ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ) ಅಧಿಕಾರಿಗಳ...
Published: 24th March 2022 08:23 PM | Last Updated: 24th March 2022 08:23 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು 52 ವರ್ಷದ ವ್ಯಕ್ತಿ ಮತ್ತು ಅವರ ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ) ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಗುರುವಾರ ಪ್ರಕರಣ ದಾಖಲಿಸಿದ್ದಾರೆ.
ಜ್ಞಾನಭಾರತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಮಂಗನಹಳ್ಳಿ ನಿವಾಸಿ ಶಿವಕುಮಾರ್(52) ಅವರು ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಇದನ್ನು ಓದಿ: ತಂದೆ-ಮಗಳ ಸಾವು; ಕಸದ ಲಾರಿ ಹರಿದು ಬಾಲಕಿ ಸಾವು: ತಲಾ 10 ಲಕ್ಷ ರೂ ಪರಿಹಾರ ಘೋಷಣೆ
ಶಿವಕುಮಾರ್ ಅವರು ತಮ್ಮ ಮಗಳು ಚೈತನ್ಯಾ ಅವರ ಮದುವೆಗೆ ಕಲ್ಯಾಣ ಮಂಟಪಕ್ಕೆ ಕಾಯ್ದಿರಿಸಲು ಹೋಗಿದ್ದರು. ಅಲ್ಲಿಂದ ಮನೆಗೆ ವಾಪಸ್ಸಾಗುವಾಗ ಮಧ್ಯಾಹ್ನ 3.15ರ ಸಮಯದಲ್ಲಿ ಮಂಗನಹಳ್ಳಿ ಕ್ರಾಸ್ನಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಿಸಿದೆ. ತಂದೆ, ಮಗಳು ಸಂಚರಿಸುತ್ತಿದ್ದ ಹೋಂಡಾ ಆ್ಯಕ್ಟೀವಾ ಸ್ಕೂಟರ್ಗೂ ಬೆಂಕಿ ತಗುಲಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ತಂದೆ-ಮಗಳಿಬ್ಬರೂ ಸಿಲುಕಿದ್ದಾರೆ. ಶಿವರಾಜ್ಗೆ ಶೇ.80 ರಷ್ಟು, ಚೈತನ್ಯಾಳಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದವು. ದಾರಿ ಹೋಕರು ಗಮನಿಸಿ, ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.
ಇನ್ನು ಮಂಗನಹಳ್ಳಿ ಬಳಿ ಟ್ರಾನ್ಸ್ಫಾರ್ಮರ್ ಸಿಡಿದು ಮೃತಪಟ್ಟ ತಂದೆ- ಮಗಳ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಹೇಳಿದ್ದಾರೆ.