ಎಸ್ಎಸ್ಎಲ್ಸಿ ಪರೀಕ್ಷೆ ಹಾಲ್ಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ: ಸಚಿವ ನಾಗೇಶ್ ಸ್ಪಷ್ಟನೆ
ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ.
Published: 25th March 2022 11:48 AM | Last Updated: 25th March 2022 12:08 PM | A+A A-

ಬಿಸಿ ನಾಗೇಶ್
ಬೆಂಗಳೂರು: ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗಳನ್ನು ಆಫ್ಲೈನ್ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ.ಧಾರವಾಡದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಇತರ ಜಿಲ್ಲೆಗಳಲ್ಲಿಯೂ ಹಿಜಾಬ್ ವಿವಾದ ಪಸರಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಪಠ್ಯದಲ್ಲಿ 'ಭಗವದ್ಗೀತೆ' ಅಳವಡಿಕೆಗೆ ಸಮಿತಿ ರಚನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಮನವಿ ಮಾಡಿದರು. ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.