ಬಜೆಟ್ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಶೀಘ್ರದಲ್ಲಿಯೇ ಸಮಿತಿ ರಚನೆ: ಸಿಎಂ ಬೊಮ್ಮಾಯಿ
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.
Published: 26th March 2022 01:20 PM | Last Updated: 26th March 2022 02:01 PM | A+A A-

ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ. ‘ಬಜೆಟ್ ಘೋಷಣೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಬೇಕು ಎಂದು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದೇನೆ. ಎಲ್ಲಾ ಇಲಾಖೆಗಳು ಹಣಕಾಸು ಇಲಾಖೆಯ ಜೊತೆ ಸಂಪರ್ಕದಲ್ಲಿರಬೇಕು. ಇಲಾಖೆಗಳ ನಡುವೆ ಸಂವಹನಕ್ಕೆ ಅನುಕೂಲವಾಗುವಂತೆ ಸಮಿತಿ ಕೆಲಸ ಮಾಡಲಿದೆ. ಮೊದಲ ಬಾರಿಗೆ ಸಮಿತಿ ರಚಿಸಲಾಗುತ್ತಿದೆ’ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯ ಬಜೆಟ್ ಆರ್ಥಿಕತೆಯನ್ನು ಬೆಳವಣಿಗೆಯ ಹಾದಿಗೆ ತರುತ್ತದೆ: ಸಿಎಂ ಬೊಮ್ಮಾಯಿ
ಬಿಜೆಪಿ ಸರ್ಕಾರ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುತ್ತಿದೆ. ನವೆಂಬರ್ನಲ್ಲಿ ವಿಶ್ವ ಹೂಡಿಕೆದಾರರ ಸಮಾವೇಶ ಸಂಘಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಕಳೆದ ಮೂರು ತ್ರೈಮಾಸಿಕಗಳ ಅವಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರತದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ವಿದೇಶಿ ಹೂಡಿಕೆದಾರರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ ಇದು ಎಂದು ತಿಳಿಸಿದರು.
‘ಏ. 1ರಂದು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಂದು ಯಶಸ್ಸಿನಿ ಯೋಜನೆಯನ್ನು ಅವರು ಉದ್ಘಾಟಿಸಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ಜಾರಿಗೆ ತರಲು ಕ್ಷೀರಾಭಿವೃದ್ಧಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಇದರಿಂದ ರೈತರಿಗೆ ಆರ್ಥಿಕ ಸಹಾಯ ಸಿಗುತ್ತದೆ. ಏ.5 ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಬಜೆಟ್ ಚರ್ಚೆ ಬಿಟ್ಟು, ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆಗೆ ಆಹ್ವಾನ: ಸರ್ಕಾರದ ಪ್ರಕಟಣೆಗೆ ಕಾಂಗ್ರೆಸ್ ಪ್ರತಿಭಟನೆ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಅಮಿತ್ ಶಾ ಅವರು ಸರ್ಕಾರದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವುದಿಲ್ಲ. ವರಿಷ್ಠರು ಕರೆದಾಗ ದೆಹಲಿಗೆ ಹೋಗಿ ಈ ಕುರಿತು ಚರ್ಚೆ ಮಾಡುವೆ’ ಎಂದು ಹೇಳಿದರು.