ಬೆಂಗಳೂರು: ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಬಾಲಕ ಸಾವು
ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದ 13 ವರ್ಷದ ಬಾಲಕನೊಬ್ಬ ನಗರದ ಹೊರವಲಯದಲ್ಲಿರುವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
Published: 28th March 2022 08:08 AM | Last Updated: 28th March 2022 01:59 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದ 13 ವರ್ಷದ ಬಾಲಕನೊಬ್ಬ ನಗರದ ಹೊರವಲಯದಲ್ಲಿರುವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಮೃತ ಬಾಲಕನನ್ನು ಸಂತೋಷ್ (13) ಎಂದು ಗುರ್ತಿಸಲಾಗಿದ್ದು, ವಿದ್ಯಾನಗರದ ನಿವಾಸಿಯಾಗಿದ್ದು, ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ಸಂತೋಷ್ ಶನಿವಾರ ಶಾಲೆಗೆ ಹೋಗಿದ್ದು ತರಗತಿ ಮುಗಿಸಿ ಸ್ನೇಹಿತರ ಗುಂಪಿನೊಂದಿಗೆ ಸರ್ಜಾಪುರದ ದೊಡ್ಡಕೆರೆ ಕೆರೆಗೆ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕೊಳೆತು ಗಬ್ಬೆದ್ದು ನಾರುತ್ತಿರುವ ವಿಭೂತಿಪುರ ಕೆರೆ; ನಿವಾಸಿಗಳ ಆಕ್ರೋಶ
ಕೆರೆಗೆ ಧುಮುಕಿದ ಸಂತೋಷ್ ನಾಪತ್ತೆಯಾಗಿರುವುದನ್ನು ಅರಿತ ಸ್ನೇಹಿತರು ನೀರಿಗೆ ಧುಮುಕಿ ಕೆಲ ಕಾಲ ಈಜಿ ಹುಡುಕಾಟ ನಡೆಸಿದ್ದಾರೆ. ಬಳಿಕ ಸಂತೋಷ್ ಸಿಗದಿದ್ದಾಗ ಆತಂಕಗೊಂಡು ಸ್ಥಳೀಯರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳು ದೇಹವನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ರಾತ್ರಿಯಾಗಿದ್ದರಿಂದ ಕಗ್ಗತ್ತಲಲ್ಲಿ ಬಾಲಕನ ಹುಡುಕುವುದು ಕಷ್ಟಕರವಾಗಿತ್ತು. ಭಾನುವಾರ ಬೆಳಿಗ್ಗೆ ಬಾಲಕನ ಮೃತದೇಹವನ್ನು ಹೊರಗೆ ತೆಗೆಯಲಾಯಿತು. ಪ್ರಕರಣವನ್ನು ಅಸಹಜ ಸಾವಿನ ಪ್ರಕರಣವೆಂದು ದಾಖಲಿಸಿಕೊಳ್ಳಲಾಗಿದೆ ಎಂದು ಸರ್ಜಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.