ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಕುರಿತ ಚರ್ಚೆ ಜನರು ಚಿಂತನೆ ನಡೆಸಲು ಪ್ರಚೋದನೆ ನೀಡಲಿದೆ: ಸಿಎಂ ಬೊಮ್ಮಾಯಿ
ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ಲಾಘಿಸಿದ್ದಾರೆ.
Published: 31st March 2022 09:39 AM | Last Updated: 31st March 2022 02:26 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ಲಾಘಿಸಿದ್ದಾರೆ.
ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆ ಕುರಿತಾಗಿ ಬುಧವಾರ ಮಾತನಾಡಿದ ಅವರು ವಿಧಾನಸಭೆಯಲ್ಲಿ ಚುನಾವಣೆ ಸುಧಾರನಣೆ ಕುರಿತ ಚರ್ಚೆಯಿಂದ ಬರುವ ಸಲಹೆಗಳು ಬರಲಿದ್ದು, ಇದು ಜನರು ಪ್ರಮುಖವಾಗಿ ಯುವಕರು ಚಿಂತನೆಗಳ ನಡೆಸಲು ಪ್ರಚೋದನೆ ನೀಡಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮೀಸಲಾತಿ ಹೆಚ್ಚಳ: ಶೀಘ್ರದಲ್ಲೇ ಸರ್ವಪಕ್ಷ ಸಭೆ ನಡೆಸಿ ಅಂತಿಮ ನಿರ್ಧಾರ – ಸಿಎಂ ಬೊಮ್ಮಾಯಿ
ತಮಿಳುನಾಡಿನಿಂದ ದೇಶವನ್ನು ನೋಡುವ ದೃಷ್ಟಿಕೋನ ಬೇರೆ ಇದೆ. ಈಶಾನ್ಯ ರಾಜ್ಯಗಳ ದೃಷ್ಟಿಕೋನ ಬೇರೆ ಇದೆ. ಆದರೂ, ಎಲ್ಲರೂ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡು ಬಂದಿದ್ದೇವೆ. ದೇಶದ ಜನರಲ್ಲಿ ಒಂದು ಅಂತರ್ಗತ ಶಕ್ತಿ ಇದೆ. ಬೇರೆ ಬೇರೆ ರಾಷ್ಟ್ರಗಳು ಒಂದೇ ರೀತಿಯ ವ್ಯವಸ್ಥೆ ಇದ್ದರೂ, ಪ್ರಜಾಪ್ರಭುತ್ವ ಬುಡಮೇಲಾಗಿದೆ. ನಮ್ಮ ದೇಶದಲ್ಲಿ ಅಧಿಕಾರ ಹಸ್ತಾಂತರ ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ
ಅಮೆರಿಕದಂತ ದೇಶದಲ್ಲಿ ಅಧಿಕಾರ ಹಸ್ತಾಂತರವಾಗಲು ಎಷ್ಟು ಕಷ್ಟವಾಯಿತು ಎನ್ನುವುದನ್ನು ನೋಡಿದ್ದೇವೆ. ಪ್ರಜಾಪ್ರಭುತ್ವ ಗಟ್ಟಿಯಾಗಿರುವುದರಿಂದಲೇ ಚುನಾವಣೆ ವ್ಯವಸ್ಥೆ ಸುಧಾರಣೆ ಕುರಿತು ಮಾತನಾಡುತ್ತಿದ್ದೇವೆ. ನಾವು ಹತಾಶರಾಗಬೇಕಿಲ್ಲ. ಹಾಗಂತ ಉತ್ತಮ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಬೇಕಿಲ್ಲ. ಚುನಾವಣಾ ಅಕ್ರಮಗಳನ್ನು ತಡೆಯುವ ಪ್ರಯತ್ನ ನಡೆಸಬೇಕು. ಕೆಲವು ವ್ಯಕ್ತಿಗಳು ಅಧಿಕಾರಕ್ಕೆ ಬರುವಾಗ ಇರುವ ತತ್ವ ಸಿದ್ಧಾಂತ, ಅಧಿಕಾರಕ್ಕೆ ಬಂದ ನಂತರ ಅಧಿಕಾರದಲ್ಲಿ ಉಳಿಯಲು ತಮ್ಮ ತತ್ವ-ಸಿದ್ಧಾಂತವನ್ನೇ ಬಲಿಕೊಟ್ಟಿರುವ ಉದಾಹರಣೆ ಇವೆ' ಎಂದು ಅವರು ಉಲ್ಲೇಖಿಸಿದರು.
ಕಾರ್ಪೊರೇಟ್ ಪ್ರಭಾವ 1970ರವರೆಗೆ ಇರಲಿಲ್ಲ. ಆ ಬಳಿಕ ಅದು ಪ್ರಭಾವಿಸಿದೆ. ಬೇರೆ ಬೇರೆ ರೀತಿಯಲ್ಲಿ ನಿಯಂತ್ರಿಸುವ ಕೆಲಸ ಬಹಳ ಹಿಂದಿನಿಂದಲೂ ಇದೆ. ಅದರ ವಿಸ್ತಾರ ಇದೀಗ ದೊಡ್ಡದಾಗಿದೆ. ಇದೆಲ್ಲ ನ್ಯೂನತೆಗಳ ನಡುವೆ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನ ಮಾಡಬೇಕು. ಅಧಿಕಾರ ರಾಜಕೀಯದಲ್ಲಿ ಜನಪರ ಆಡಳಿತ ನೀಡಿದರೆ, ಜನರು ಒಳ್ಳೆಯದಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ: ಹಲಾಲ್ ಕಟ್ ಮಾಂಸ ಬಳಕೆಗೆ ತೀವ್ರ ಆಕ್ಷೇಪ: ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು ದೇಶದಲ್ಲಿ ಹಾಳಾಗಿರುವ ಚುನಾವಣಾ ವ್ಯವಸ್ಥೆಯನ್ನು ಸುಧಾರಿಸಲು ಪ್ರಮುಖವಾಗಿ ಚುನಾವಣಾ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಕಾರ್ಪೊರೇಟ್ ಸಂಸ್ಥೆಗಳ ನಡುವೆ ಏರ್ಪಡುತ್ತಿರುವ ಮೈತ್ರಿ ಮತ್ತು ಆ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ನೀಡುವುದನ್ನು ನಿಲ್ಲಿಸಬೇಕು. ನ್ಯಾಯಾಧೀಶರನ್ನು ನೇಮಕ ಮಾಡುವಂತೆ, ಚುನಾವಣಾ ಆಯೋಗದ ಮುಖ್ಯಸ್ಥರು ಮತ್ತು ಅದರ ಸದಸ್ಯರನ್ನು ನೇಮಿಸಲು ಕೊಲಿಜಿಯಂ ಅನ್ನು ಸ್ಥಾಪಿಸಬೇಕೆಂದು ಹೇಳಿದರು.
ಬಳಿಕ ವಿದ್ಯುನ್ಮಾನ ಮತಯಂತ್ರಗಳ ಮೇಲೆ ತನ್ನ ಅನುಮಾನವನ್ನು ವ್ಯಕ್ತಪಡಿಸಿದ ಅವರು, 19 ಲಕ್ಷಕ್ಕೂ ಹೆಚ್ಚು ಇವಿಎಂಗಳು ನಾಪತ್ತೆಯಾಗುವುದಕ್ಕೆ ಭಾರತೀಯ ಚುನಾವಣಾ ಆಯೋಗ ಹೊಣೆಯಾಗಿದೆ ಎಂದು ತಿಳಿಸಿದರು.