ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಶೀಘ್ರದಲ್ಲೇ ಭರ್ತಿ: ಧರ್ಮೇಂದ್ರ ಪ್ರಧಾನ್
ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
Published: 01st May 2022 01:06 PM | Last Updated: 01st May 2022 01:06 PM | A+A A-

ಧರ್ಮೇಂದ್ರ ಪ್ರಧಾನ್
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯಲ್ಲಿ 'ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ ಕಡ್ಡಾಯ ಮಾಧಿರ್ಗಸೂಚಿ'ಯನ್ನು ಬಿಡುಗಡೆ ಮಾಡಿ ಧರ್ಮೇಂದ್ರ ಪ್ರಧಾನ್ ಅವರು ಮಾತನಾಡಿದರು.
ಈ ವೇಳೆ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 600 ಹುದ್ದೆಗಳ ಪೈಕಿ 380 ಹುದ್ದೆಗಳು ಮೈಸೂರು ವಿಶ್ವವಿದ್ಯಾನಿಲಯದಲ್ಲಿಯೇ ಖಾಲಿ ಇವೆ. ವಿಶ್ವವಿದ್ಯಾಲಯಗಳಲ್ಲಿ ಸಮರ್ಪಕ ಅಧ್ಯಾಪಕರಿಲ್ಲದೆ ಎನ್ಇಪಿಯನ್ನು ಹೇಗೆ ಜಾರಿಗೆ ತರುತ್ತೀರಿ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಾಪಕರ ನೇಮಕಾತಿಗೆ ಕಾಲಾವಕಾಶ ಬೇಕಾಗುತ್ತದೆ. ಕಳೆದ ಐದು ವರ್ಷಗಳಿಂದ ಸಂಶೋಧನೆಗಾಗಿ ವಿಶ್ವವಿದ್ಯಾನಿಲಯಗಳಿಗೆ ಯಾವುದೇ ಹೊಸ ಯೋಜನೆಗಳು ಅಥವಾ ಅನುದಾನಗಳ ನೀಡಲಾಗಿಲ್ಲ. ಆದರೀಗ ಅನುದಾನದ ಮಾದರಿ ಬದಲಾಗಿದೆ ಮತ್ತು ವಿಶ್ವವಿದ್ಯಾಲಯಗಳಿಗೆ ಸಾಕಷ್ಟು ಅನುದಾನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಮಾತನಾಡಿ, ವಿಶ್ವವಿದ್ಯಾಲಯಗಳಲ್ಲಿನ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸಮಾನಾಂತರವಾಗಿ ಅತಿಥಿ ಅಧ್ಯಾಪಕರನ್ನು ನೇಮಿಸಿಕೊಳ್ಳಲಾಗುತ್ತಿದೆ.
ಆದರೂ ಕಾಯಂ ಅಧ್ಯಾಪಕರ ನೇಮಕಾತಿಯು ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲಿದೆ ಎಂದು ತಿಳಿಸಿದರು.
ವಿಶ್ವವಿದ್ಯಾನಿಲಯಗಳಿಗೆ ಸಾಕಷ್ಟು ಅನುದಾನವನ್ನು ಪಡೆಯುವುದನ್ನು ಒಳಗೊಂಡಿರುವ ವಿಷಯಗಳನ್ನು ಸುಧಾರಿಸಲು ಅವರು ಪ್ರಯತ್ನ ನಡೆಸಲಾಗುತ್ತಿದೆ. ಇದರ ಅನ್ವಯ ಏಕೀಕೃತ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಯನ್ನು" ಅಳವಡಿಸಿಕೊಳ್ಳುವುದು ನಮ್ಮ ಮುಂದಿರುವ ಮಾರ್ಗಗಳಾಗಿವೆ. ಇದರೊಂದಿಗೆ ವಿಷಯಗಳನ್ನು ಸರಳಗೊಳಿಸಲಾಗುತ್ತಿದೆ. ಮತ್ತು ಇಡೀ ಆಡಳಿತವು ಪಾರದರ್ಶಕವಾಗಿರುತ್ತದೆ ಎಂದು ಹೇಳಿದರು.