ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಮ್ಮ ಬೆಂಬಲ: ಅಜಿತ್ ಪವಾರ್
ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ಹೇಳಿದ್ದಾರೆ.
Published: 01st May 2022 01:30 PM | Last Updated: 01st May 2022 01:30 PM | A+A A-

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್
ಪುಣೆ: ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ಹೇಳಿದ್ದಾರೆ.
ಮಹಾರಾಷ್ಟ್ರ ಸಂಸ್ಥಾಪನಾ ದಿನದ ಅಂಗವಾಗಿ ಪುಣೆ ನಗರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೆರೆಯ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ನೆಲೆಸಿರುವ ಮರಾಠಿ ಮಾತನಾಡುವ ಜನರ ಹೋರಾಟವನ್ನು ನಾವು ಬೆಂಬಲಿಸುತ್ತೇವೆಂದು ಹೇಳಿದ್ದಾರೆ.
1960ರಲ್ಲಿ ಇದೇ ದಿನ ಪಶ್ಚಿಮ ರಾಜ್ಯ ರಚನೆಯಾಯಿತು.‘‘ಮಹಾರಾಷ್ಟ್ರ ರಚನೆಯಾಗಿ 62 ವರ್ಷಗಳಾಗಿದ್ದು, ಈ ಸಂದರ್ಭದಲ್ಲಿ ಬೀದರ್, ಭಾಲ್ಕಿ, ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಕರ್ನಾಟಕದ ಮರಾಠಿ ಭಾಷಿಕ ಗ್ರಾಮಗಳನ್ನು ವಿಲೀನಗೊಳಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಅವರ ಹೋರಾಟಕ್ಕೆ ಮಹಾರಾಷ್ಟ್ರದ ಜನತೆ ಹಾಗೂ ಸರ್ಕಾರ ಅವರ ಜೊತೆಗಿದೆ ಎಂಬುದನ್ನು ಈ ಸಂದರ್ಭದಲ್ಲಿ ಹೇಳಲು ಇಚ್ಛಿಸುತ್ತೇನೆ. ಆ ಪ್ರದೇಶಗಳು ಮಹಾರಾಷ್ಟ್ರದ ಭಾಗವಾಗುವವರೆಗೆ ನಾವು ಅವರ ಹೋರಾಟವನ್ನು ಬೆಂಬಲಿಸುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆಂದು ಹೇಳಿದ್ದಾರೆ.
ಇದೇ ವೇಳೆ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಕತ್ತಿಗಳನ್ನು ಪೊಲೀಸರು ವಶಕಪಡಿಸಿದ್ದರ ಕುರಿತು ಪವಾರ್ ಅವರು ಕಳವಳ ವ್ಯಕ್ತಪಡಿಸಿದರು. ಈ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ನಿಗಾ ಇರಿಸಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಧಾರ್ಮಿಕ ಸಾಮರಸ್ಯವನ್ನು ಕಾಪಾಡುವಂತೆ ಜನತೆ ಬಳಿ ಮನವಿ ಮಾಡಿಕೊಳ್ಳುತ್ತೇವೆ. ಜನರು ತಮ್ಮ ಅಭಿಪ್ರಾಯಗಳ ವ್ಯಕ್ತಪಡಿಸುವಾಗ ಅವರ ಮಾತುಗಳು ಯಾವುದೇ ಸಮುದಾಯದ ಭಾವನೆಗಳನ್ನು ಕೆರಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಮಾತನಾಡಿ, "ಪೊಲೀಸರು ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ಧರಾಗಿದ್ದಾರೆ. ಸಾಮಾಜಿಕ ಸಾಮರಸ್ಯ ಕಾಪಾಡುವಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.
ಕಳೆದ ಬುಧವಾರವಷ್ಟೇ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿದ್ದ ಎಸ್ಯುವಿಯಿಂದ 89 ಕತ್ತಿಗಳು ಮತ್ತು ಕಠಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ನಾಲ್ವರನ್ನು ಬಂಧನಕ್ಕೊಳಪಡಿಸಿದ್ದರು.
ಕರ್ನಾಟಕದ ಭಾಗವಾಗಿರುವ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿನ ಹೆಚ್ಚಿನ ಸಂಖ್ಯೆಯ ಜನರು ಮರಾಠಿ ಮಾತನಾಡುತ್ತಾರೆ. ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಕುರಿತ ವಿಚಾರದ ಇದೀಗ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ವಿಚಾರಣೆ ಹಂತದಲ್ಲಿದೆ.