ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: 11ನೇ ದಿನಕ್ಕೆ ಕಾಲಿಟ್ಟ ಸ್ವಾಮೀಜಿಯ ಉಪವಾಸ ಸತ್ಯಾಗ್ರಹ
ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರೂ, ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿ, ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ.
Published: 02nd May 2022 09:55 AM | Last Updated: 02nd May 2022 03:07 PM | A+A A-

ಪಂಚಮಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿ
ಬಾಗಲಕೋಟೆ: ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರೂ, ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿ, ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ.
ಏಪ್ರಿಲ್ 14ರೊಳಗೆ ಸಮುದಾಯದ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದ ನಂತರ ಸ್ವಾಮೀಜಿ ಪ್ರತಿಭಟನೆ ಆರಂಭಿಸಿದ್ದು, ಏಪ್ರಿಲ್ 21 ರಿಂದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಕೂಡಾ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ನಮ್ಮ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಹಿಂದೆ ಸರ್ಕಾರಕ್ಕೆ ಹಲವು ಬಾರಿ ಗಡುವು ನೀಡಲಾಗಿತ್ತು. ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸಲಾಗುವುದು, ಈ ಸಂದರ್ಭದಲ್ಲಿ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.
ಇದನ್ನೂ ಓದಿ: 2ಎ ಮೀಸಲಾತಿಗೆ ಆಗ್ರಹ: ಸರ್ಕಾರಕ್ಕೆ ಏ.14ಕ್ಕೆ ಹೊಸ ಗಡುವು ನೀಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ
ಇತ್ತೀಚಿಗೆ ಹರಿಹರ ಪಂಚಮಸಾಲಿ ಪೀಠದಲ್ಲಿ ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿದ್ದ ಮುಖ್ಯಮಂತ್ರಿ ಬೊಮ್ಮಾಯಿ, ಹಿಂದುಳಿದ ವರ್ಗಗಳ ಆಯೋಗದಿಂದ ವಿಸ್ತೃತ ವರದಿ ಪಡೆದ ನಂತರ ಪಂಚಮಸಾಲಿ ಸಮುದಾಯಕ್ಕೆ ಒಬಿಸಿ ಮೀಸಲಾತಿ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ಸಮುದಾಯದ ಸಚಿವರು ಮೀಸಲಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಯ ವಿರುದ್ಧ ಹರಿಹಾಯ್ದ ಸ್ವಾಮೀಜಿ, ಪ್ರಕ್ರಿಯೆ ವಿಳಂಬ ಮಾಡುವ ಸಚಿವರು ನಮ್ಮ ಸಮುದಾಯದಲ್ಲಿ ಇಲ್ಲ. ಸಿಸಿ ಪಾಟೀಲ್, ಶಾಸಕ ಯತ್ನಾಳ್. ವಿಜಯನಂದ ಕಾಶಪ್ಪನವರ್ ಸೇರಿದಂತೆ ಎಲ್ಲರೂ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ ಎಂದು ತಿಳಿಸಿದರು.