ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ: ಬಸವ ಜಯಂತಿ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ
12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಬಸವ ಜಯಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಶುಭಾಶಯಗಳನ್ನು ಕೋರಿದ್ದಾರೆ.
Published: 03rd May 2022 08:01 AM | Last Updated: 03rd May 2022 01:30 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: 12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಬಸವ ಜಯಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು. "ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ನಮ್ಮ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ: ಸಿಎಂ ಬೊಮ್ಮಾಯಿ ತಿರುಗೇಟು
ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯ ಆಚರಣೆ ಶುರು ಮಾಡಲು ನಿಶ್ಚಯಿಸಿದರು.
ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕ ತಿಳಿಯದಿರುವುದು ದೊಡ್ಡ ಗೊಂದಲ ಸೃಷ್ಟಿಯಾಗಿತ್ತು. ಆಗ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ತಿಳಿಸಿದರು. ಅಂದಿನಿಂದಲೂ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.
ಈ ದಿನ ಎಲ್ಲ ಬಸವಣ್ಣನ ಬೆಂಬಲಿಗರು ಅವರ ಸಂದೇಶಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಸಮಾಜಕ್ಕೆ ಬಸವಣ್ಣನವರು ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾರೆ. ಜೊತೆಗೆ ಬಸವಣ್ಣನ ವಚನಗಳು ಎಲ್ಲೆಡೆ ಹರಿದಾಡುತ್ತವೆ.
ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಹಲವು ಮಹತ್ತರ ಬದಲಾವಣೆಗಳು?
ಕನ್ನಡಲ್ಲೇ ಟ್ವೀಟ್ ಮಾಡಿ ಬಸವಣ್ಣನವರ ಸ್ಮರಿಸಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನುೋ ಕೋರಿದ್ದಾರೆ.
ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ.https://t.co/RMDe2bTiMD
— Narendra Modi (@narendramodi) May 3, 2022
ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಮೋದಿಯವರು, ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ ಎಂದು ಹೇಳಿದ್ದಾರೆ.