ಬೆಂಗಳೂರು: ಕೆಪಿಎಸ್ ಸಿ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ, ಎಎಪಿ ಮುಖಂಡರ ಬಂಧನ
ಕೆಪಿಎಸ್ ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ನಿಂದ ಕೆಪಿಎಸ್ ಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಎಎಪಿ ಕಾರ್ಯಕರ್ತರನ್ನು ಪೊಲೀಸರು ಆರಂಭದಲ್ಲೇ ಬಂಧಿಸಿದರು.
Published: 04th May 2022 06:45 PM | Last Updated: 04th May 2022 06:45 PM | A+A A-

ಎಎಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಕೆಪಿಎಸ್ ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ನಿಂದ ಕೆಪಿಎಸ್ ಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಎಎಪಿ ಕಾರ್ಯಕರ್ತರನ್ನು ಪೊಲೀಸರು ಆರಂಭದಲ್ಲೇ ಬಂಧಿಸಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ಬೆಂಗಳೂರು ಘಟಕ ಅಧ್ಯಕ್ಷ ಮೋಹನ್ ದಾಸರಿ, ಒಂದು ಕಡೆ ವಿದ್ಯಾರ್ಹತೆಗೆ ಯೋಗ್ಯವಾದ ಕೆಲಸ ಸಿಗುತ್ತಿಲ್ಲ. ಮತ್ತೊಂದು ಕಡೆ ಸರ್ಕಾರಿ ಉದ್ಯೋಗಗಳನ್ನು ಮಾರಿಕೊಂಡು, ಅರ್ಹರಿಗೆ ಬಿಜೆಪಿ ಸರ್ಕಾರ ಅನ್ಯಾಯ ಮಾಡುತ್ತಿದೆ. ಇದರಿಂದಾಗಿ ಸರ್ಕಾರಿ ಉದ್ಯೋಗಗಳು ಉಳ್ಳವರು ಹಾಗೂ ಭ್ರಷ್ಟರ ಪಾಲಾಗುತ್ತಿವೆ ಎಂದು ಆರೋಪಿಸಿದರು.
ನಾಡಿನ ಯುವಜನತೆಗೆ ಉದ್ಯೋಗ ಕಲ್ಪಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಕೆಪಿಎಸ್ ಸಿ ಸ್ಥಾಪಿಸಲಾಗಿದೆ. ಆದರೆ, ಇದು ಉದ್ಯೋಗಗಳನ್ನು ಭ್ರಷ್ಟ ರಾಜಕಾರಣಿಗಳಿಗೆ ಕೋಟಿ ಕೋಟಿ ರೂಪಾಯಿಗಳಿಗೆ ಮಾರಾಟ ಮಾಡುವ ಅಂಗಡಿಯಾಗಿ ಪರಿವರ್ತನೆಗೊಂಡಿದೆ. ಅಕ್ರಮಕ್ಕೆ ಹೆಸರುವಾಸಿಯಾಗಿರುವ ಕೆಪಿಎಸ್ ಸಿಯನ್ನು ಸರಿದಾರಿಗೆ ತರಲು ಸಾಧ್ಯವಾಗದಿದ್ದರೆ ಅದನ್ನು ಮುಚ್ಚಿ ಬಿಡುವುದೇ ಒಳ್ಳೆಯದು ಎಂದು ಆಕ್ರೋಶ ವ್ಯಕ್ತಪಡಿಸಿದರು.