ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಕೆ ಸಾಧ್ಯತೆ: ಹವಾಮಾನ ಇಲಾಖೆ
ಬೇಸಿಗೆ ಬಿರು ಬಿಸಿಲಿನ ನಡುವೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published: 04th May 2022 02:51 PM | Last Updated: 04th May 2022 02:55 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೇಸಿಗೆ ಬಿರು ಬಿಸಿಲಿನ ನಡುವೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಅರಬಿಯನ್ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ಮೇ 6 ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿರುವುದಾಗಿ ಸೂಚನೆ ನೀಡಲಾಗಿದೆ.
ಮಂಗಳವಾರ ಸಂಜೆ ಬೆಂಗಳೂರು ನಗರದಲ್ಲಿನ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮೂಲಕ ಅಚ್ಚರಿಗೆ ಕಾರಣವಾಯಿತು. ಸಂಜೆ 8-30ರವರೆಗೂ ಮಳೆಯ ವರದಿಯಾಗಿರಲಿಲ್ಲ. ಪ್ಯಾಲೆಸ್ ರಸ್ತೆಯಲ್ಲಿ 6 ಮಿ. ಮೀ. ಮಳೆಯಾಗಿತ್ತು. ಬೆಂಗಳೂರು ನಗರದಲ್ಲಿ ಜಲಾವೃತವಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿಯ ಅಧಿಕಾರಿಗಳು ಹೇಳಿದ್ದಾರೆ. ಆದಾಗ್ಯೂ,ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮರವೊಂದು ಬಿದಿದ್ದೆ ಎನ್ನಲಾಗಿದೆ.
ಇದನ್ನೂ ಓದಿ: ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಇಂದು ದಕ್ಷಿಣ ಅರಬಿಯನ್ ಸಮುದ್ರದಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆಯಿರುವುದರಿಂದ ಮೇ 6ರಿಂದ ಕಡಿಮೆ ಒತ್ತಡ ಪರಿಸ್ಥಿತಿವೇರ್ಪಟ್ಟು, ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.