ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ
ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
Published: 05th May 2022 08:19 AM | Last Updated: 05th May 2022 01:16 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ 15 ಜಿಲ್ಲೆಗಳ ಸಣ್ಣ ನಗರ ಕೇಂದ್ರಗಳಲ್ಲಿ 1,519 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ 60 ಯೋಜನೆಯ ಒಟ್ಟು ರೂ. 2,465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್ ಅವರು, ಬೆಂ.ಗ್ರಾ.ಜಿಲ್ಲೆ, ಮಂಡ್ಯ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ), ದಕ್ಷಿಣ ಕನ್ನಡ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪ.ಪಂ.ಹೊರತುಪಡಿಸಿ), ಯಾದಗಿರಿ, ಬೀದರ್, ಶಿವಮೊಗ್ಗ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2022-23ರಿಂದ 2024-25ನೆ ಸಾಲಿನ ಆರ್ಥಿಕ ವರ್ಷದವರೆಗೆ ಸಿಎಂ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲಾಗುತ್ತದೆ' ಎಂದು ಮಾಹಿತಿ ನೀಡಿದರು.
‘ಬೆಂ.ಗ್ರಾಮಾಂತರ ಜಿಲ್ಲೆ: 80.34 ಕೋಟಿ ರೂ., ಮಂಡ್ಯ ಜಿಲ್ಲೆ: 89.25 ಕೋಟಿ ರೂ., ಕೋಲಾರ ಜಿಲ್ಲೆ: 123.25 ಕೋಟಿ ರೂ., ಚಿಕ್ಕಬಳ್ಳಾಪುರ ಜಿಲ್ಲೆ (ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ): 84.82 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲೆ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪ.ಪಂ.ಹೊರತುಪಡಿಸಿ): 72.25 ಕೋಟಿ ರೂ., ಧಾರವಾಡ ಜಿಲ್ಲೆ: 29.75 ಕೋಟಿ ರೂ., ಗದಗ ಜಿಲ್ಲೆ(ಗದಗ-ಬೆಟಗೇರಿ ನಗರಸಭೆ ಹೊರತುಪಡಿಸಿ): 55.25 ಕೋಟಿ ರೂ., ಕೊಪ್ಪಳ: 106.25 ಕೋಟಿ ರೂ., ಹಾವೇರಿ ಜಿಲ್ಲೆ(ಶಿಗ್ಗಾಂವ, ಬಂಕಾಪುರ, ಸವಣೂರು ಪುರಸಭೆ ಹೊರತುಪಡಿಸಿ): 97.75 ಕೋಟಿ ರೂ., ರಾಯಚೂರು ಜಿಲ್ಲೆ(ಮಾನ್ವಿ, ಜಾಲಹಳ್ಳಿ ಪುರಸಭೆ ಮತ್ತು ಕವಿತಾಳ ಪ.ಪಂ.ಹೊರತುಪಡಿಸಿ): 110.50 ಕೋಟಿ ರೂ., ಯಾದಗಿರಿ ಜಿಲ್ಲೆ: 114.75 ಕೋಟಿ ರೂ., ಬೀದರ್ ಜಿಲ್ಲೆ: 97.75 ಕೋಟಿ ರೂ., ಶಿವಮೊಗ್ಗ ಜಿಲ್ಲೆ: 106.25 ಕೋಟಿ ರೂ., ಬಾಗಲಕೋಟೆ ಜಿಲ್ಲೆ: 208.25 ಕೋಟಿ ರೂ., ಉತ್ತರ ಕನ್ನಡ ಜಿಲ್ಲೆ: 143.02 ಕೋಟಿ ರೂ., ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲು ಸಮಿತಿ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: ಕೆರೂರು ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ
ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೆ ಹಂತದ ಯೋಜನೆಯಡಿ 3,885 ಕೋಟಿ ರೂ.ಮೊತ್ತದ ಕ್ರಿಯಾ ಯೋಜನೆಗೆ ಸಚಿವ ಸಂಪುಟ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅದಕ್ಕೆ ಪೂರಕವಾಗಿ ಈ ಬಾರಿಯ 15 ಜಿಲ್ಲೆಗಳು ಸೇರಿದಂತೆ ಈವರೆಗೆ 25 ಜಿಲ್ಲೆಗಳ ಸಿಎಂ ಅಮೃತ ನಗರೋತ್ಥಾನ ಯೋಜನೆಯ 2367.57 ಕೋಟಿ ರೂ.ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿದಂತಾಗಿದೆ.