ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆ ಸುಪರ್ದಿಗೆ: ಸರ್ಕಾರ ಆದೇಶ 

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳನ್ನು ಮತ್ತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. 

Published: 06th May 2022 07:33 PM  |   Last Updated: 06th May 2022 07:33 PM   |  A+A-


BBMP office

ಬಿಬಿಎಂಪಿ ಕಚೇರಿ

Online Desk

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳನ್ನು ಮತ್ತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ.

ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು ತೀರ್ಮಾನಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ: ಡಾ. ಕೆ.ಸುಧಾಕರ್

ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ನಗರ ಆರೋಗ್ಯ ಅಭಿಯಾನದಡಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿವೆ.

ಬಿಬಿಎಂಪಿ ನೇಮಿಸಿರುವ ಸಿಬ್ಬಂದಿ, ಪಿಠೋಪಕರಣಗಳು ಮತ್ತು ಸಲಕರಣೆಗಳು ಕೂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿಕೊಳ್ಳಲಿದೆ. ಸರ್ಕಾರದ ಎಲ್ಲಾ  ಸೌಲಭ್ಯಗಳು ರಾಜ್ಯದಾದ್ಯಂತ ಒಂದೇ ರೀತಿ ಸಿಗಬೇಕು ಅನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ನಿರ್ವಹಣೆ ಒಂದೇ ರೀತಿ ನಡೆಯಬೇಕು. ಸರ್ಕಾರದ ಸೌಲಭ್ಯಗಳು ನಗರದ ಪ್ರದೇಶವಾಗಿರಲಿ ಅಥವಾ ಹಳ್ಳಿಯೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯಲ್ಲಿ ಇರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಇದು ನೆರವಾಗಲಿದೆ ಎಂದಿದ್ದಾರೆ.


Stay up to date on all the latest ರಾಜ್ಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp