ಪಿಎಸ್ಐ ಹಗರಣ: ಬೇರುಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡ್ತೀವಿ- ಆರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

Published: 06th May 2022 11:02 AM  |   Last Updated: 06th May 2022 02:21 PM   |  A+A-


Home minister Araga Jnanendra  receiving the guard of honor in the passing out parade of 4th batch of KSRP in Kalaburagi on Friday.

ಕಲಬುರಗಿಯಲ್ಲಿ ಶುಕ್ರವಾರ ನಡೆದ ಕೆಎಸ್‌ಆರ್‌ಪಿ 4ನೇ ಬ್ಯಾಚ್‌ನ ಪಾಸಿಂಗ್ ಔಟ್ ಪರೇಡ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಗೌರವ ವಂದನೆ ಸ್ವೀಕರಿಸಿದರು.

Online Desk

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ತಪ್ಪಿತಸ್ಥರು ಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಸರಕಾರದ ಕೆಲ ಸಚಿವರ ತೇಜೋವಧೆ ಮಾಡುತ್ತಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಹಗರಣ ಮಾಡುವವರು ಭವಿಷ್ಯದಲ್ಲಿ ‌ಮುಟ್ಟಿ ನೋಡಿಕೊಳ್ಳುವಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಪಿಎಸ್ಐ ಅಕ್ರಮ ಪ್ರಕರಣ ತನಿಖೆ, ಸಂಪುಟ ವಿಸ್ತರಣೆಯ ಗುಸುಗುಸು: ಶೂಟಿಂಗ್ ನಲ್ಲಿ ಹಲವು ಸಚಿವರು ಭಾಗಿ!

ಇದೇ ವೇಳೆ  ಪಿಎಸ್ಐ ನೇಮಕಾತಿ ಅಕ್ರಮದಲ್ಲಿ 300 ಕೋಟಿ ರೂ ಅಕ್ರಮ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಅವರು. ಸಿದ್ದರಾಮಯ್ಯ 300 ಕೋಟಿ ಅಲ್ಲ 3,000 ಕೋಟಿ ಆರೋಪ ಮಾಡಲಿ, ಮಾತಾಡೋಕೆ ಅವರಿಗೆ ವಾಕ್ ಸ್ವಾತಂತ್ರ್ಯ ಇದೆ. ನಿರಾಧಾರವಾಗಿ ಆರೋಪ ಮಾಡೋದು, ದಾಖಲಾತಿ ಕೇಳಿದರೆ, ಓಡಿಹೋಗೋದು ಕಾಂಗ್ರೆಸ್ ಕೆಲಸ. ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್​ನವರೇ ಎಂದು ತಿಳಿಸಿದರು.

ವಿಶೇಷ ಅಭಿಯೋಜಕರ ನೇಮಕ
ಬಳಿಕ ತಾಜ ಸುಲ್ತಾನಪುರದಲ್ಲಿರುವ ಕೆಎಸ್ಆರ್ ಪಿ 6ನೇ ಪಡೆಯ ಹೆಚ್ಚುವರಿ ತರಬೇತಿ ಶಾಲೆಯ ಆವರಣದಲ್ಲಿ ಶುಕ್ರವಾರ ನಡೆದ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ 4ನೇ ತಂಡದ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, 545 ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅನುವಾಗುವಂತೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಡಿವೈಎಸ್ಪಿ​ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್ ಮೇತ್ರೆ ಬಂಧನ

ಈ ಹಿಂದೆ ಅನೇಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದ್ದರೂ ತನಿಖೆ ಮಾಡಿರಲಿಲ್ಲ. ಒಂದು ವೇಳೆ ತನಿಖೆಯಾಗಿದ್ದರೆ ಈ ಪ್ರಕರಣ ನಡೆಯುತ್ತಿರಲಿಲ್ಲ. ಆದರೆ,ುಈ ವಿಷಯ ಗೊತ್ತಾದ ಎರಡು ಗಂಟೆಯೊಳಗೆ ವಿಶೇಷ ತಂಡ ರಚಿಸಿ ತನಿಖೆಗೆ ನಿರ್ದೇಶಿಸುವ ಮುಖಾಂತರ ಬದ್ಧತೆ ತೋರಿಸಿದ್ದೇವೆ. ಇಲ್ಲಿಯವರೆಗೆ 48 ಜನರನ್ನು ಬಂಧಿಸಲಾಗಿದೆ. ತನಿಖೆ ಆಳವಾಗಿ ನಡೆಯುತ್ತಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ನಿಶ್ಚಿತ ಎಂದು ತಿಳಿಸಿದರು.

ಪೊಲಿಸ್ ಇಲಾಖೆ ಬಲವರ್ಧನೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಠಾಣೆಗಳ ಅಭಿವೃದ್ಧಿಗೆ ರೂ.200 ಕೋಟಿ ಬಿಡುಗಡೆ ಮಾಡಲಾಗಿದೆ. 400 ವಿಧಿವಿಜ್ಞಾನ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುವುದು. ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ವೆಚ್ಚ ಭರಿಸಲು ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.


Stay up to date on all the latest ರಾಜ್ಯ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp