ದುಬೈ: ನಾಳೆ ಬಿಎಸ್ ಯಡಿಯೂರಪ್ಪಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ.
Published: 07th May 2022 12:04 PM | Last Updated: 07th May 2022 03:02 PM | A+A A-

ಬಿಎಸ್ ಯಡಿಯೂರಪ್ಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ.
ಕಳೆದ 15 ವರ್ಷಗಳಿಂದ ದುಬೈನಲ್ಲಿರುವ ಕನ್ನಡಿಗರು ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದ್ದು, ಪ್ರತಿ ವರ್ಷ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಬಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಈ ವರ್ಷ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು, ನಾಳೆ ದುಬೈನ ಅಲ್ ಸಫಾದಲ್ಲಿರುವ ಜಿಎಸ್ ಎಸ್ ಶಾಲೆಯಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ದುಬೈ ಬಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹವಾಲ್ದಾರ್ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಇಳಕಲ್ ನ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ, ಬಸವ ಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದೇವರು ಪಾಲ್ಗೊಳ್ಳಲಿದ್ದಾರೆ. ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಉತ್ತಮ ಚಂದ, ಕ್ರೆಡೆಲ್ ಅಧ್ಯಕ್ಷ ಎಂ. ರುದ್ರೇಶ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.