ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶದ ಪ್ರಕಾರ ಕಟ್ಟುನಿಟ್ಟಿನ ಕ್ರಮ: ಅಜಾನ್ v/s ಸುಪ್ರಭಾತ ಸಂಘರ್ಷಕ್ಕೆ ಗೃಹ ಸಚಿವರ ಪ್ರತಿಕ್ರಿಯೆ
ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶವನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Published: 09th May 2022 10:28 AM | Last Updated: 09th May 2022 01:50 PM | A+A A-

ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಶಬ್ದಮಾಲಿನ್ಯ ತಡೆಗೆ ಕೋರ್ಟ್ ಆದೇಶವನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಆಜಾನ್ ಮತ್ತು ಸುಪ್ರಭಾತ ಸಂಘರ್ಷ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರತಿಯೊಬ್ಬರೂ ಶಬ್ದಮಾಲಿನ್ಯ ತಡೆಗೆ ನ್ಯಾಯಾಲಯದ ಆದೇಶ ಪಾಲಿಸಬೇಕು. ಕೋರ್ಟ್ ಆದೇಶವನ್ನು ಪಾಲಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಆಜಾನ್ ವಿರುದ್ಧ ಹಿಂದೂ ಸಂಘಟನೆಗಳ ಸಮರ, ಮುಂಜಾನೆಯಿಂದ ದೇವಸ್ಥಾನಗಳಲ್ಲಿ ಸುಪ್ರಭಾತ!
ಅಜಾನ್ ವಿರುದ್ಧವಾಗಿ ಹನುಮಾನ್ ಚಾಲೀಸ್ ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಹೇಳಿರುವ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯ ಆದೇಶವನ್ನು ಎಲ್ಲರೂ ಗೌರವಿಸಬೇಕು, ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.