ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿಗೆ ಶೌರ್ಯಚಕ್ರ ಪ್ರಶಸ್ತಿ ಪ್ರದಾನ; ಹೆಮ್ಮೆಯ ಸಂಗತಿ ಎಂದ ಸಿಎಂ ಬೊಮ್ಮಾಯಿ
ಕಳೆದ ಜುಲೈನಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು...
Published: 11th May 2022 07:52 PM | Last Updated: 11th May 2022 07:52 PM | A+A A-

ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ
ಬೆಂಗಳೂರು: ಕಳೆದ ಜುಲೈನಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಈ ಕುರಿತು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೀಡಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಕಾಶಿರಾಯ ಬಮ್ಮನಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.
ಇದನ್ನು ಓದಿ: ಸ್ಥಳೀಯ ಸಂಸ್ಥೆ ಚುನಾವಣೆ: ನ್ಯಾಯಾಲಯ ಆದೇಶದ ಅಧ್ಯಯನಕ್ಕೆ ಸಿಎಂ ಬೊಮ್ಮಾಯಿ ಸೂಚನೆ
ಕನ್ನಡಿಗ ಯೋಧನೊಬ್ಬ ಪಡೆದಿರುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಬಮ್ಮನಳ್ಳಿ ಅವರ ಶೌರ್ಯ, ಸಾಹಸ, ಬಲಿದಾನಗಳಿಗೆ ಸಂದ ಗೌರವ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಬಮ್ಮನಳ್ಳಿ ಅವರ ಕುಟುಂಬಕ್ಕೆ ಸರ್ಕಾರ ನಿಯಮಾನುಸಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
Havildar Kashiray Bommanahalli, from Vijayapur, Karnataka, awarded #ShauryaChakra, posthumously, for his exceptional bravery in a terrorist encounter in Jammu & Kashmir last year. pic.twitter.com/OqWVnGdHE9
— Basavaraj S Bommai (@BSBommai) May 11, 2022