
ಸಂಗ್ರಹ ಚಿತ್ರ
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಸುದೀರ್ಘ ವಿಚಾರಣೆ ಬಳಿಕ ಸಿಐಡಿ ಅಧಿಕಾರಿಗಳು ಶಾಂತಕುಮಾರ್ ರನ್ನು ಬಂಧಿಸಿದ್ದಾರೆ. ಇನ್ನು ಕೆಲ ದಿನಗಳ ಹಿಂದೆ ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳನ್ನು ಸಿಐಡಿ ಬಂಧಿಸಿತ್ತು.
ಇದನ್ನೂ ಓದಿ: ಪಿಎಸ್ ಐ ನೇಮಕಾತಿ ಹಗರಣ: ಧಾರವಾಡದ ಪ್ರಮುಖ ಕೋಚಿಂಗ್ ಸೆಂಟರ್ ನ ಶಿಕ್ಷಕನನ್ನು ವಶಕ್ಕೆ ಪಡೆದ ಸಿಐಡಿ
1996ರ ಬ್ಯಾನ್ ನ ಸಿಎಆರ್ ಕಾನ್ಸ್ ಟೇಬಲ್ ಆಗಿ ನೇಮಕಗೊಂಡಿದ್ದ ಶಾಂತಕುಮಾರ್ 2006ರಲ್ಲಿ ಆರ್ಎಸ್ಐ ಎಕ್ಸಾಂ ಬರೆದಿದ್ದರು. 2006ರಲ್ಲಿ ಸಿಎಆರ್ಆರ್ಎಸ್ಐ ಆಗಿ ನೇಮಕವಾಗಿದ್ದರು. ಇನ್ನು 2007-08ರಿಂದ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸುಮಾರು 10 ವರ್ಷಗಳಿಗೂ ಹೆಚ್ಚು ಕಾಲ ನೇಮಕಾತಿ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಶಾಂತಕುಮಾರ್ ಕರ್ತವ್ಯ ನಿರ್ವಹಿಸಿದ್ದರು. ಇನ್ನು ಆರೋಪ ಕೇಳಿಬಂದ ಬೆನ್ನಲ್ಲೇ ಇವರನ್ನು ಎತ್ತಂಗಡಿ ಮಾಡಲಾಗಿತ್ತು.