ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.
Published: 12th May 2022 08:14 AM | Last Updated: 12th May 2022 08:14 AM | A+A A-

ಕೊಲೆಯಾದ ಹರ್ಷ
ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಹೆಚ್ಚಿನ ತನಿಖೆಗಾಗಿ 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂಬ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮನವಿಯನ್ನು ವಿಶೇಷ ನ್ಯಾಯಾಲಯವು ಬುಧವಾರ ಪುರಸ್ಕರಿಸಿದೆ.
ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.
ಎನ್ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಕಸನಪ್ಪ ನಾಯಕ್ ಬುಧವಾರ ವಿಚಾರಣೆ ನಡೆಸಿ, ಎನ್ಐಎ ಪರ ವಕೀಲರು ಸಲ್ಲಿಸಿದ ಮನವಿಯನ್ನು ಮಾನ್ಯ ಮಾಡಿದರು.
ಎನ್ಐಎ ಪರ ವಾದ ಮಂಡಿಸಿದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನಕುಮಾರ್, ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ಗುರುತು ಪತ್ತೆಯ ಪೆರೇಡ್ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೆ, ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ.
ಜೊತೆಗೆ ಆರೋಪಿಗಳು ಬಳಸುತ್ತಿದ್ದವಿದ್ಯುನ್ಮಾನ ಸಾಧನಗಳು ಮತ್ತು ಸಿಡಿಆರ್ ವಿಶ್ಲೇಷಣೆಯು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಇನ್ನೂ ನಡೆಯಬೇಕಿದೆ. ಹಾಗಾಗಿ ತನಿಖೆಗಾಗಿ
ಆರೋಪಿಗಳ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದರು.