ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ: ಪುರಾವೆ ಸಂಗ್ರಹ ಅಭಿಯಾನ, COTPA ತಿದ್ದುಪಡಿಗೆ ಆಗ್ರಹ

ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಸಂಬಂಧ ತಂಬಾಕು ಮುಕ್ತ ಕರ್ನಾಟಕಕ್ಕಾಗಿ ಒಕ್ಕೂಟ ಸಂಸ್ಥೆಯ ಪುರಾವೆ ಸಂಗ್ರಹ ಅಭಿಯಾನ ಹಮ್ಮಿಕೊಂಡಿತ್ತು.

Published: 12th May 2022 07:29 PM  |   Last Updated: 12th May 2022 07:37 PM   |  A+A-


cotpa-thumb

ಧೂಮಪಾನ-ಪುರಾವೆ ಸಂಗ್ರಹ ಅಭಿಯಾನ

Online Desk

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಸಂಬಂಧ ತಂಬಾಕು ಮುಕ್ತ ಕರ್ನಾಟಕಕ್ಕಾಗಿ ಒಕ್ಕೂಟ ಸಂಸ್ಥೆಯ ಪುರಾವೆ ಸಂಗ್ರಹ ಅಭಿಯಾನ ಹಮ್ಮಿಕೊಂಡಿತ್ತು.

2000ರಿಂದ ತಂಬಾಕು ಮುಕ್ತ ಕರ್ನಾಟಕಕ್ಕಾಗಿ ಒಕ್ಕೂಟವು ರಾಜ್ಯದಲ್ಲಿ ತಂಬಾಕು ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿರುವ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಒಕ್ಕೂಟವಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ (COTPA) 2003 ರಲ್ಲಿ ಜಾರಿಗೆ ಬಂದಿದ್ದು, ಈ ಕಾನೂನು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುತ್ತದೆ. ಆದರೆ ಈ ನಿಬಂಧನೆಯನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಸ್ಪಷ್ಟವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ. ವಿಶೇಷವಾಗಿ ಮಾರಾಟದ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ ಮಾಡಲಾಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ತಡೆಗಟ್ಟಲು, COTPA ಕಾಯ್ದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಆಗ್ರಹಿಸಿದೆ.

ಪುರಾವೆ ಸಂಗ್ರಹ ಅಭಿಯಾನ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಅತಿರೇಕದ ಉಲ್ಲಂಘನೆಗಳನ್ನು ಬಹಿರಂಗಪಡಿಸಲು ಪುರಾವೆಗಳನ್ನು ಸಂಗ್ರಹಿಸಲು, ನೂರಾರು NSS ಸ್ವಯಂಸೇವಕರು, ನಾಗರಿಕರು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಇತರರು ಚಹಾ ಅಂಗಡಿಗಳು, ಬೇಕರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಉದ್ಯಾನವನಗಳು, ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಆವರಣದಲ್ಲಿ ಸಿಗರೇಟ್ ಮತ್ತು ಬೀಡಿ ತುಂಡುಗಳನ್ನು ಸಂಗ್ರಹಿಸುತ್ತಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ) ಸಿಗರೇಟ್ ಮತ್ತು ಬೀಡಿ ತುಂಡುಗಳನ್ನು ಸಂಗ್ರಹಿಸುವ ಅಭಿಯಾನವನ್ನು ಬಿಬಿಎಂಪಿ ಮಾಜಿ ಮೇಯರ್ ಗಂಗಾಂಬಿಕೆ, ಬಿಎಂಸಿಆರ್‌ಐ ಡೀನ್ ಮತ್ತು ನಿರ್ದೇಶಕ ಡಾ ಕೆ ರವಿ, ಖ್ಯಾತ ಹೃದ್ರೋಗ ತಜ್ಞ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮತ್ತು ಇತರ 'ತಂಬಾಕು ಮುಕ್ತ ಬೆಂಗಳೂರಿಗಾಗಿ ಒಕ್ಕೂಟ'ದ ಸದಸ್ಯರು ಪ್ರಾರಂಭಿಸಿದರು.

ಬೆಂಗಳೂರು ನಗರದಾದ್ಯಂತ ನಡೆಯುತ್ತಿರುವ 3 ವಾರಗಳ ಈ ಅಭಿಯಾನವು ವಿಶ್ವ ತಂಬಾಕು ರಹಿತ ದಿನ 2022 ರ ಮೇ 31 ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (RGUHS) ಮುಕ್ತಾಯಗೊಳ್ಳಲಿದೆ, ಅಲ್ಲಿ ಸಂಗ್ರಹಿಸಿದ ಎಲ್ಲಾ ಸಿಗರೇಟ್ ಮತ್ತು ಬೀಡಿ ತುಂಡುಗಳನ್ನು ವಿಶೇಷ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸಂಸತ್ತಿನ ಸದಸ್ಯರನ್ನು ಆಹ್ವಾನಿಸಲಾಗುತ್ತದೆ ಮತ್ತು ಸಂಸತ್ತಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅತಿರೇಕದ ಧೂಮಪಾನದ ವಿಷಯವನ್ನು ಪ್ರಸ್ತಾಪಿಸಲು ಮತ್ತು COTPA ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ವಿನಂತಿಸುವ ಮನವಿಯನ್ನು ಸಲ್ಲಿಸಲಾಗುತ್ತದೆ.


Stay up to date on all the latest ರಾಜ್ಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp