
ಸಂಗ್ರಹ ಚಿತ್ರ
ಬೆಂಗಳೂರು: ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಬೆಂಗಳೂರು ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಹಾಗೂ ಆ ಭಾಗದ ಸರ್ವತೋಮುಖ ಅಭಿವೃದ್ಧಿಯನ್ನು ತೀವ್ರಗೊಳಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
ತಕ್ಷಣ ಜಾರಿಗೆ ಬರುವಂತೆ ಸಂಪರ್ಕ ಕಚೇರಿಯನ್ನೂ ಒಳಗೊಂಡಂತೆ ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಬೆಂಗಳೂರಿನ ಎಲ್ಲ ಕಚೇರಿಗಳನ್ನು ಸಿಬ್ಬಂದಿ ಸಮೇತವಾಗಿ ಒಂದು ವಾರದೊಳಗೆ ಆಲಮಟ್ಟಿಗೆ ಸ್ಥಳಾಂತರಿಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಆದೇಶದಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.