ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ: ರೇಸ್ ನಲ್ಲಿ ಒಂಬತ್ತು ಐಎಎಸ್ ಅಧಿಕಾರಿಗಳು
ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಒಂಬತ್ತು ಹಿರಿಯ ಐಎಎಸ್ ಅಧಿಕಾರಿಗಳು ರೇಸ್ನಲ್ಲಿದ್ದಾರೆ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಗುರುವಾರ ಹೇಳಿದ್ದಾರೆ.
Published: 13th May 2022 08:45 AM | Last Updated: 13th May 2022 08:50 AM | A+A A-

ಜೆ.ಸಿ ಮಾಧುಸ್ವಾಮಿ
ಬೆಂಗಳೂರು: ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಒಂಬತ್ತು ಹಿರಿಯ ಐಎಎಸ್ ಅಧಿಕಾರಿಗಳು ರೇಸ್ನಲ್ಲಿದ್ದಾರೆ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಗುರುವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮುಂದಿನ ಮುಖ್ಯ ಕಾರ್ಯದರ್ಶಿ ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಇದೇ ತಿಂಗಳು ನಿವೃತ್ತಿಯಾಗಲಿದ್ದು ಒಂಬತ್ತು ಹಿರಿಯ ಐಎಎಸ್ ಅಧಿಕಾರಿಗಳು ಈ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.
ಯಾರನ್ನು ನೇಮಿಸುತ್ತಾರೆ ಎಂಬುದು ಸಿಎಂ ಮೇಲೆ ಅವಲಂಬಿಸಿದೆ. ಆದರೆ ಆದಷ್ಟು ಶೀಘ್ರವೇ ನಮೇಕ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ರವಿಕುಮಾರ್ ಅವರನ್ನು ಡಿಸೆಂಬರ್ 2020 ರಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು.
ಹಿರಿಯ ಐಎಎಸ್ ಅಧಿಕಾರಿಗಳಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಐಎಸ್ ಎನ್ ಪ್ರಸಾದ್, ರಜನೀಶ್ ಗೋಯೆಲ್, ಪ್ರದೀಪ್ ಸಿಂಗ್ ಕರೋಲಾ ಮತ್ತು ಯೋಗೇಂದ್ರ ತ್ರಿಪಾತ್ ಮುಖ್ಯ ಕಾರ್ಯದರ್ಶಿ ಹುದ್ದೆ ರೇಸ್ ನಲ್ಲಿದ್ದಾರೆ.