
ಸಾಂದರ್ಭಿಕ ಚಿತ್ರ
ತೀರ್ಥಹಳ್ಳಿ: ಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.
ಸಂಪತ್ ಮತ್ತು ಆದರ್ಶ್ ಬಂಧಿತರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ತೀರ್ಥಹಳ್ಳಿ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಪ್ರಕರಣ ತನಿಖೆ ವಿಚಾರವಾಗಿ ಚರ್ಚಿಸಿದರು. ದೌರ್ಜನ್ಯಕ್ಕೆ ಒಳಗಾದ ದಂಪತಿ ತಾಲ್ಲೂಕು ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಘಟನೆಯಲ್ಲಿ ಇನ್ನೂ ಇಬ್ಬರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ತನ್ನ ಪತಿಯ ಎದುರೆೇ ಆರೋಪಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಸೋಮವಾರ ದಂಪತಿ ತೀರ್ಥಹಳ್ಳಿಯಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿತ್ತು.