ಬೆಂಗಳೂರು: ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಎರಡು ವರ್ಷಗಳಿಂದ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಪತ್ತೆಯಾಗಿರುವ ಘಟನೆ ರಾಜಾಜಿನಗರ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Published: 15th May 2022 10:37 AM | Last Updated: 15th May 2022 10:37 AM | A+A A-

ಶವ ಇದ್ದ ಕಾರು
ಬೆಂಗಳೂರು: ಎರಡು ವರ್ಷಗಳಿಂದ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಪತ್ತೆಯಾಗಿರುವ ಘಟನೆ ರಾಜಾಜಿನಗರ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾರು ಮಾಲೀಕರು ಕೆಲ ತಿಂಗಳ ಹಿಂದೆ ವಾಹನ ಬಿಟ್ಟು ಮನೆ ಖಾಲಿ ಮಾಡಿದ್ದು, ಕಳೆದ ಎರಡು ವರ್ಷಗಳಿಂದ ಬಳಕೆಯಾಗದೆ ನಿಂತಲ್ಲೇ ನಿಂತಿದ್ದ ಕಾರಿನಲ್ಲಿ ಶವ ಪತ್ತೆಯಾಗಿದೆ ಎಂದು ರಾಜಾಜಿನಗರ ಕೈಗಾರಿಕಾ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಬೆಂಗಳೂರು: ಹಣಕಾಸಿನ ವಿಚಾರವಾಗಿ ಸ್ನೇಹಿತನಿಂದಲೇ ಬಿಪಿಒ ಸಿಬ್ಬಂದಿ ಹತ್ಯೆ
"ಶುಕ್ರವಾರ ಮಧ್ಯಾಹ್ನ, ಕಾರಿನಿಂದ ಬರುತ್ತಿದ್ದ ಕೊಳೆತ ವಾಸನೆ ತಡೆದುಕೊಳ್ಳಲಾಗದೇ ನಿವಾಸಿಗಳು ಮಾಗಡಿ ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿದಾಗ ಒಳಗೆ ವ್ಯಕ್ತಿಯ ಕೊಳೆತ ಶವವನ್ನುಪತ್ತೆಯಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ಈ ವ್ಯಕ್ತಿ ಹಲವು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ಶಂಕಿಸಿರುವ ಪೊಲೀಸರು, ಆತನ ಗುರುತು ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
“ಯಾವಾಗ ಮತ್ತು ನಿಖರವಾಗಿ ಏನಾಯಿತು ಎಂಬುದನ್ನು ತಿಳಿಯಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಸಾವಿನ ಕಾರಣ ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.