ಸಂಪುಟ ವಿಸ್ತರಣೆ: ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಚರ್ಚೆ- ಮುಖ್ಯಮಂತ್ರಿ ಬೊಮ್ಮಾಯಿ
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್ ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.
Published: 15th May 2022 01:16 PM | Last Updated: 15th May 2022 01:16 PM | A+A A-

ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್ ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಸರ್ಕಾರ ಚುನಾವಣಾ ಪ್ರಕ್ರಿಯೆಯಲ್ಲಿದೆ. ಹೈಕಮಾಂಡ್ ನಿರ್ದೇಶನ ನೀಡಿದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು, ಈ ಸಂಬಂಧ ಇನ್ನೆರಡು ದಿನದಲ್ಲಿ ಹೈಕಮಾಂಡ್ ಜೊತೆಗೆ ದೂರವಾಣಿ ಮೂಲಕ ಮಾತನಾಡುತ್ತೇನೆ ಎಂದರು.
Chief Minister @BSBommai has said the state government is under election process. Once the high command directs the cabinet expansion will be done. He said he will contact high command over phone in a day or two
— Amit Upadhye (@Amitsen_TNIE) May 15, 2022
@Arunkumar_TNIE @NewIndianXpress @XpressBengaluru @KannadaPrabha pic.twitter.com/TyhfHTibRS
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಷಯ ಹೈಕಮಾಂಡ್ ಗೆ ಬಿಟ್ಟಿದ್ದು, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಬಗ್ಗೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.
ನಂತರ ಮುಖ್ಯಮಂತ್ರಿ ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರವಾಗಿರುವ ದಾರಾವತಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತಿತರರು ಉಪಸ್ಥಿತರಿದ್ದರು.
ಇಂದು ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ಸುಕ್ಷೇತ್ರ ಶ್ರೀ ದಾರಾವತಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದು ನಂತರ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆನು.
— Basavaraj S Bommai (@BSBommai) May 15, 2022
ಈ ಸಂದರ್ಭದಲ್ಲಿ ಕೇಂದ್ರ ಸಚಿವ @JoshiPralhad, ಶಾಸಕ @BelladArvind ಹಾಗೂ ಇತರರು ಉಪಸ್ಥಿತರಿದ್ದರು. pic.twitter.com/ATlo2qWgGU