ಕೊಡಗಿನ ಶಾಲೆ ಆವರಣದಲ್ಲಿ ಬಜರಂಗ ದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ; ತೀವ್ರ ಆಕ್ರೋಶ

ಕೊಡಗಿನ ಶಾಲೆ ಆವರಣದಲ್ಲಿ ತನ್ನ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿರುವ ಬಜರಂಗ ದಳದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ಎಸ್‌ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ. ಆದರೆ ಬಜರಂಗ ದಳದ ವಿರುದ್ಧ...

Published: 16th May 2022 06:09 PM  |   Last Updated: 16th May 2022 06:09 PM   |  A+A-


bajarnga

ಬಜರಂಗ ದಳದ ಕಾರ್ಯಕರ್ತರು

The New Indian Express

ಮಡಿಕೇರಿ: ಕೊಡಗಿನ ಶಾಲೆ ಆವರಣದಲ್ಲಿ ತನ್ನ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿರುವ ಬಜರಂಗ ದಳದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ಎಸ್‌ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ. ಆದರೆ ಬಜರಂಗ ದಳದ ವಿರುದ್ಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.

ಬಜರಂಗ ದಳ ಮೇ 5 ರಿಂದ ಮೇ 11 ರವರೆಗೆ, ಬಜರಾಂಡಲ್ ಪೊನ್ನಂಪೇಟೆಯ ಸಾಯಿ ಶಂಕರ್ ಶಾಲೆಯಲ್ಲಿ ‘ಶೌರ್ಯ ಶಿಕ್ಷಣ ವರ್ಗ’ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ಎಂಎಲ್‌ಸಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನು ಓದಿ: ತಾಕತ್ತಿದ್ರೆ ಎಸ್ ಡಿಪಿಐ, ಎಂಐಎಂ, ಆರ್‌ಎಸ್‌ಎಸ್, ಬಜರಂಗದಳ ನಿಷೇಧಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು

ಈ ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ತರಬೇತಿಯಲ್ಲಿ ಭಾಗವಹಿಸಿದ್ದ ಸ್ವಯಂಸೇವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿ, 'ತ್ರಿಶೂಲ'ಗಳನ್ನು ಹಸ್ತಾಂತರಿಸಿದ ಬಜರಂಗದಳದ ನಡೆಯನ್ನು ಖಂಡಿಸಲಾಗುತ್ತಿದೆ.

ಜಿಲ್ಲಾ ಎಸ್‌ಡಿಪಿಐ ಸದಸ್ಯರು ಭಜರಂಗದಳದ ಈ ಕೃತ್ಯವನ್ನು ಖಂಡಿಸಿದ್ದು, ಸಂಘಟಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. “ಬಜರಂಗದಳವು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುವುದು ಖಂಡನೀಯ. ‘ಶೌರ್ಯ ಪ್ರಶಿಕ್ಷಣ ವರ್ಗ’ ಹೆಸರಿನಲ್ಲಿ ಸಂಘಟನೆ ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿದೆ. ಸಂಘಟನೆ ಮುಖಂಡರು ಹಾಗೂ ಶಸ್ತ್ರಾಸ್ತ್ರ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು' ಎಂದು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಬಶೀರ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವಿರಾಜಪೇಟೆ ಡಿವೈಎಸ್‌ಪಿ ನಿರಂಜನ್ ರಾಜ್ ಅವರು, ಈ ಸಂಬಂಧ ಬಜರಂಗದಳದ ವಿರುದ್ಧ ಯಾವುದೇ ದೂರು ಬಂದಿಲ್ಲ. “ಏರ್ ಗನ್‌ಗಳ ಬಳಕೆಗೆ ಪರವಾನಗಿ ಅಥವಾ ಅನುಮತಿ ಅಗತ್ಯವಿಲ್ಲ. ಅದನ್ನು ಕಾರ್ಯಕ್ರಮದಲ್ಲಿ ಬಳಸಲಾಗಿದೆ ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp