ಕರಾವಳಿ ಕರ್ನಾಟಕ ಭಾಗ ತೀವ್ರ ಕಟ್ಟೆಚ್ಚರ; ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ
ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ಬೇಗನೆ ಆಗಲಿದೆ.
Published: 17th May 2022 08:50 AM | Last Updated: 17th May 2022 02:02 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ಬೇಗನೆ ಆಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಮೂರು ದಿನಗಳವರೆಗೆ ಅಂದರೆ ಮೇ 19ರವರೆಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಆರೆಂಜ್ ಅಲರ್ಟ್ ಮತ್ತು ಮೇ 18ಕ್ಕೆ ರೆಡ್ ಅಲರ್ಟ್ ಅನ್ನು ಘೋಷಿಸಲಾಗಿದೆ.
ರಾಜ್ಯದ ಒಳನಾಡು ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಮಾನ್ಸೂನ್ ಸೋಮವಾರ ನೈಋತ್ಯ ಬಂಗಾಳ ಕೊಲ್ಲಿಯ ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹೆಚ್ಚಿನ ಭಾಗಗಳು ಮತ್ತು ಅಂಡಮಾನ್ ಸಮುದ್ರಕ್ಕೆ ಪ್ರವೇಶಿಸಿದೆ. ಮುಂದಿನ 2-3 ದಿನಗಳಲ್ಲಿ ಮಾನ್ಸೂನ್ ನೈಋತ್ಯ ಬಂಗಾಳ ಕೊಲ್ಲಿ, ಸಂಪೂರ್ಣ ಅಂಡಮಾನ್ ಸಮುದ್ರ, ಅಂಡಮಾನ್ ದ್ವೀಪಗಳು ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಸಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಆಗುತ್ತಿರುವ ಮಳೆಯು ಮುಂಗಾರು ಪೂರ್ವದ ಮಳೆಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹವಾಮಾನ ವ್ಯವಸ್ಥೆಗಳ ರಚನೆಯಿಂದಲೂ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಭಾರಿ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ಹೇಳುತ್ತಾರೆ.
ಈಶಾನ್ಯ ಮಧ್ಯಪ್ರದೇಶದಿಂದ ಉತ್ತರ ಒಳಭಾಗದ ತಮಿಳುನಾಡು ವಿದರ್ಭ ಮತ್ತು ಒಳಾಂಗಣ ಕರ್ನಾಟಕದಾದ್ಯಂತ ಉತ್ತರ-ದಕ್ಷಿಣ ತೊಟ್ಟಿ ಇದೆ. ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸಹ ಚಂಡಮಾರುತದ ಪರಿಚಲನೆ ಇದೆ. ಲಕ್ಷ್ವದೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆ ಇದೆ. ದಕ್ಷಿಣ ಕನ್ನಡದಲ್ಲಿ 100ಮಿಲಿ ಮೀಟರ್ ನಿಂದ 150 ಮಿಲಿ ಮೀಟರ್ ಗಿಂತ ಹೆಚ್ಚು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.