ಹೆಡಗೇವಾರ್ ಭಾಷಣ ಪಠ್ಯಪುಸ್ತಕದಲ್ಲಿ ಇರಲಿದೆ: ಬಿ.ಸಿ.ನಾಗೇಶ್; ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಇಲಾಖೆ ಸ್ಪಷ್ಟನೆ
ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.
Published: 17th May 2022 09:00 AM | Last Updated: 17th May 2022 02:05 PM | A+A A-

ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ತುಮಕೂರು: ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.
ಆರ್ಎಸ್ಎಸ್ ಸಿದ್ಧಾಂತ ಉತ್ತೇಜಿಸುವುದರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ, ಇದರಿಂದ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ರಾಷ್ಟ್ರೀಯತೆಯಿಂದ ಸ್ಫೂರ್ತಿ ಪಡೆಯಬಹುದು. ನಮ್ಮ ನಡೆಯನ್ನು ಟೀಕಿಸುವವರು ಮೊದಲು ವಿಷಯವನ್ನು ಪರಿಶೀಲಿಸಿ ನಂತರ ಚರ್ಚೆಗೆ ಬರಲಿ ಎಂದು ಅವರು ಹೇಳಿದರು.
ಪಠ್ಯಪುಸ್ತಕದಲ್ಲಿ ಹೆಡಗೇವಾರ್ ಭಾಷಣ ಇರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣಕ್ಕೆ ಹೋಗಿದೆ. ಯುವ ಮನಸ್ಸುಗಳು ಕೇವಲ ವ್ಯಕ್ತಿಗಳನ್ನು ಆದರ್ಶವಾಗಿ ತೆಗೆದುಕೊಳ್ಳುವ ಬದಲು ಸ್ಫೂರ್ತಿದಾಯಕವಾದ ಸಿದ್ಧಾಂತವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಭಗತ್ ಸಿಂಗ ಪಠ್ಯ ಬಿಟ್ಟಿಲ್ಲ: ಭಗತ್ ಸಿಂಗ್ ಕುರಿತ ವಿಷಯವನ್ನು ಪಠ್ಯಪುಸ್ತಕಗಳಿಂದ ತೆಗೆದುಹಾಕಲಾಗಿದೆ ಎಂಬುದು ಸುಳ್ಳು, ಕೆಲವರು ಪಠ್ಯಪುಸ್ತಕಗಳಲ್ಲಿ ತಮ್ಮದೇ ಆದ ಸಿದ್ಧಾಂತವನ್ನು ಸೇರಿಸಲು ಬಯಸುತ್ತಿರುವುದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿದರು.