
ಭಾರಿ ಮಳೆ
ಬೆಂಗಳೂರು: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇಂದು ಸಂಜೆ ನಿಧಾನವಾಗಿ ಆರಂಭವಾದ ಮಳೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಇಂದು ಬೆಳಗ್ಗೆಯಿಂದಲೇ ಬೆಂಗಳೂರು ನಗರದಲ್ಲಿ ತುಂತುರು ಮಳೆಯಿತ್ತು. ಈ ನಡುವೆ ಕೊಂಚ ಸಮಯ ಬಿಡುವು ನೀಡಿ ನಂತರ ರಾತ್ರಿ ೭.೩೦ಕ್ಕೆ ನಿಧಾನವಾಗಿ ಶುರುವಾದ ಮಳೆ ಮಿಂಚು ಗುಡುಗು ಸಿಡಿಲು ಅಬ್ಬರದೊಂದಿಗೆ ತೀವ್ರವಾಯಿತು. ಕೆಲವೆಡೆಗಳಲ್ಲಿ ೧೦ ಸೆಂಟಿಮೀಟರ್‌ಗೂ ಅಧಿಕ ಮಳೆಯಾಗಿದೆ. ಇದರಿಂದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ.
ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಬೆಂಗಳೂರಿಗರು ತತ್ತರ
ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮಂಗಳವಾರ, ಬುಧವಾರ ಆರೆಂಜ್ ಅಲರ್ಟ್ ನೀಡಿದ್ದು, ವರ್ಷಧಾರೆ ಮುಂದುವರಿಯುವ ಸಾಧ್ಯತೆ ಇದೆ. ಜೆಪಿ ನಗರ, ಜಯನಗರ, ಲಾಲ್‌ಬಾಗ್, ಚಿಕ್ಕಪೇಟೆ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಎಂಜಿ ರೋಡ್, ಕಬ್ಬನ್ ಪಾರ್ಕ್, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಮಾಗಡಿ ರೋಡ್, ಮೈಸೂರು ರಸ್ತೆ ಸೇರಿ ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್ ಕೂಡ ಕೈಕೊಟ್ಟಿದೆ. ಭಾರೀ ಮಳೆಯಿಂದ ಬೆಂಗಳೂರಿನ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
West, SW, South and SE #Bengaluru getting moderate to heavy thundershowers now. Next 1 hour intense rains and gusty winds likely over the city. Stay safe #BengaluruRains #Bangalore #BengaluruWeather #BangaloreWeather #BengaluruRain #BangaloreRain pic.twitter.com/9PbV17koyH
— ಕರ್ನಾಟಕ/ಬೆಂಗಳೂರು ಹವಾಮಾನ (@Bnglrweatherman) May 17, 2022
ಇದನ್ನೂ ಓದಿ: ಕರಾವಳಿ ಕರ್ನಾಟಕ ಭಾಗ ತೀವ್ರ ಕಟ್ಟೆಚ್ಚರ; ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ
ರಾಜ್ಯದಲ್ಲಿ ಮಾನ್ಸೂನ್ ಪೂರ್ವ ಮಳೆ ಜೋರಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿಯೂ ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಹಗಲಿನಲ್ಲಿಯೂ ರಾಜಧಾನಿಯ ಅನೇಕ ಕಡೆ ಮಳೆ ಸುರಿದಿದೆ. ಸಂಜೆ ಸುರಿದ ಮಳೆಯಿಂದಾಗಿ ಕಚೇರಿಯಿಂದ ಮನೆಗೆ ಹೋಗುವವರು ಪರದಾಡುವಂತಾಯಿತು. ಹಲವು ಕಡೆ ವಿವಿಧ ಕಾಮಗಾರಿಗಳಿಗಾಗಿ ಬಿಬಿಎಂಪಿ ರಸ್ತೆಗಳನ್ನು ಅಗೆದಿದ್ದು, ಅಲ್ಲೆಲ್ಲಾ ನೀರು ನಿಂತುಕೊಂಡಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿವೆ.
ರಾಜ್ಯಾದ್ಯಂತ ಇದೇ ಪರಿಸ್ಥಿತಿ
ರಾಜ್ಯದಲ್ಲಿ ಶುರುವಾದ ಬೇಸಿಗೆ ಮಳೆಯ ಹಿಂದೆಯೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ತೇವಾಂಶಭರಿತ ಮೋಡಗಳ ಪರಿಣಾಮ ನಿರಂತರ ಮಳೆ ಸುರಿಯುತ್ತಿದೆ. ಮೇ ೧೮ರಿಂದ ಮತ್ತಷ್ಟೂ ಚುರುಕಾಗುವ ಸೂಚನೆ ಇತ್ತಾದರೂ ಒಂದುದಿನ ಮುಂಚಿತವಾಗಿ ಮಳೆಯ ಸ್ವರೂಪ ಹೆಚ್ಚಾಗಿದೆ. ಇಂದು ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗಗಳಲ್ಲಿ ಭಾರಿಮಳೆಯಾಗುತ್ತಿದೆ. ಇದರ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 18, 19 ರಂದು ಈ ಜಿಲ್ಲೆಗಳಲ್ಲಿ ಮಳೆಯ ಸ್ವರೂಪ ಮತ್ತಷ್ಟೂ ತೀವ್ರವಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ,, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ,ದಾವಣಗೆರೆ, ಬಳ್ಳಾರಿಯಲ್ಲಿ ಮುಂದಿನ ೪ ದಿನ, ವಿಜಯಪರ, ರಾಯಚೂರು, ಬೀದರ್, ಯಾದಗಿರಿ, ಕಲ್ಬುರ್ಗಿ, ಗದಗ, ಕೊಪ್ಪಳ,ಬಾಗಲಕೋಟೆ, ಹಾವೇರಿ ಮತ್ತು ಬೆಳಗಾವಿಯಲ್ಲಿ ಮುಂದಿನ ೪೮ ಗಂಟೆಗಳ ಅವಧಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು
2 ದಿನ ಆರೆಂಜ್ ಅಲರ್ಟ್
ಬೆಂಗಳೂರಿನಲ್ಲಿ ಮೇ 17 ರಿಂದ 21ರವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮಂಗಳವಾರ ಮತ್ತು ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದ್ದು, ಮೇ 20 ಮತ್ತು 21ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಐಎಂಡಿ ಮುನ್ಸೂಚನೆಯಂತೆ ರಾಜಧಾನಿಯಲ್ಲಿ ಮಂಗಳವಾರ ರಾತ್ರಿ ಭಾರೀ ಮಳೆ ಸುರಿಯುತ್ತಿದೆ.
ಮಳೆಗೆ ಬಿಬಿಎಂಪಿ ಸಿದ್ಧತೆ
ಇನ್ನು ಹವಾಮಾನ ಇಲಾಖೆ ನೀಡಿರುವ ಮುಂಗಾರು ಪೂರ್ವ ಮಳೆಯ ಮುನ್ಸೂಚನೆಯಿಂದ ಬಿಬಿಎಂಪಿ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಮಳೆ ಹಾನಿ ನಿರ್ವಹಿಸಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈಗಾಗಲೇ ಅತಿ ಹೆಚ್ಚು ಮಳೆ ನೀರು ನಿಲ್ಲುವ ರಸ್ತೆಗಳನ್ನು ಗುರುತಿಸಿರುವ ಬಿಬಿಎಂಪಿ, ಓರ್ವ ಸಿಬ್ಬಂದಿಯನ್ನು ಸ್ಥಳದಲ್ಲೇ ನಿಯೋಜಿಸಿ ಮಳೆ ನೀರಿನ ತೆರವು ಮಾಡಲು ಮುಂದಾಗಿದೆ.