ಎಸ್ಎಸ್ಎಲ್'ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ
ಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದಂತೆ ಹಾಗೂ ಅವರ ಮಾನಸಿಕ ಆರೋಗ್ಯಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯೊಂದನ್ನು ಆರಂಭಿಸಿದೆ.
Published: 19th May 2022 09:23 AM | Last Updated: 19th May 2022 02:13 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದಂತೆ ಹಾಗೂ ಅವರ ಮಾನಸಿಕ ಆರೋಗ್ಯಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯೊಂದನ್ನು ಆರಂಭಿಸಿದೆ.
ಎಸ್ಎಸ್ಎಲ್'ಸಿ ಫಲಿತಾಂಶ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಕಿವಿಮಾತು ಹೇಳಿದ್ದಾರೆ.
ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾಗಿರುವ ಎಸ್ಎಸ್ಎಲ್'ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷೆಯಲ್ಲಿದ್ದಾರೆ. ಫಲಿತಾಂಶಗಳು ಅಂದುಕೊಂಡ ಹಾಗೇ ಬರಲಿ, ಬಾರದೇ ಇರಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಫಲಿತಾಂಶ ಜೀವನದ ಅಂತ್ಯವಲ್ಲ. ಆರಂಭವೂ ಅಲ್ಲ. ಅದು ಶೈಕ್ಷಣಿಕ ಜೀವನದ ಒಂದು ಪ್ರಕ್ರಿಯೆ. ಸೋಲು-ಗೆಲವು ಎರಡೂ ಜೀವನದಭಾಗ. ದೃತಿಗೆಡದೆ ಮುನ್ನುಗ್ಗಿ ಎಂದು ಹಾರೈಸಿದ್ದಾರೆ.
ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೂ ಫಲಿತಾಂಶಕ್ಕೆ ಶುಭ ಹಾರೈಕೆಗಳು, ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಹೇಳಿದ್ದಾರೆ.
ಇದೇ ವೇಳೆ ಸಹಾಯವಾಣಿ ಕುರಿತು ಮಾಹಿತಿ ನೀಡಿರುವ ಸಚಿವರು, ಎಸ್ಎಸ್ಎಲ್'ಸಿ ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು 080 46110007 ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.