ಸುಪ್ರೀಂ ಆದೇಶ ಸ್ವಾಗತಿಸಿದ ಸಿಎಂ ಬೊಮ್ಮಾಯಿ, ಶೀಘ್ರದಲ್ಲೇ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭ
ಮುಂದಿನ ಎಂಟು ದಿನಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
Published: 20th May 2022 03:19 PM | Last Updated: 20th May 2022 03:19 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಮುಂದಿನ ಎಂಟು ದಿನಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
8 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಸುಪ್ರೀಂ ಆದೇಶ ಸ್ವಾಗತಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಸುಪ್ರೀಂ ಕೋರ್ಟ್ ಎಂಟು ವಾರದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದೆ. ಈ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಎಲೆಕ್ಷನ್ ಗೆ ಸಂಬಂಧಿಸಿದ ಡಿ ಲಿಮಿಟೇಷನ್ ಪ್ರಕ್ರಿಯೆ ಅಂತಿಮ ಅಂತದಲ್ಲಿದೆ. ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ ಎಂದು ತಿಳಿಸಿದರು.
ಬಿಬಿಎಂಪಿ ಚುನಾವಣೆ ಸಂಬಂಧ ಸಮಿತಿ ಕೂಡ ಮಾಡಿದ್ದೇವೆ. ಆದಷ್ಟು ಬೇಗ ಚುನಾವಣೆಯನ್ನ ಮಾಡ್ತೀವಿ. ಹಿಂದಿನ ಆದೇಶದಲ್ಲಿ ಮೀಸಲಾತಿ ಇಲ್ಲ ಅಂತ ತೀರ್ಪು ನೀಡಿತ್ತು. ನಂತರ ಒಬಿಸಿ ಮೀಸಲಾತಿ ಸಹಿತ ಚುನಾವಣೆ ಮಾಡಲು ಸೂಚನೆ ನೀಡಿದೆ. ನಾವು ಕೂಡ ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಲ್ಲ ಅಂತ ಹೇಳಿದ್ದೆವು. ಈಗ ನಮ್ಮ ಮನ್ನಣೆಯಂತೆ ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ದೊರೆತಿದೆ ಎಂದು ಹೇಳಿದರು.
ಮತ್ತೆ ಕಾಲಾವಕಾಶ ಕೇಳ್ತೀರಾ ಅನ್ನೋ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋರ್ಟ್ ತೀರ್ಪುನ್ನು ಪಾಲಿಸಬೇಕು. ನಾವು ಚುನಾವಣೆಗೆ ಸಿದ್ದರಿದ್ದೇವೆ ಎಂದ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
198 ವಾರ್ಡ್ಗಳನ್ನು ಹೊಂದಿರುವ ಬಿಬಿಎಂಪಿಯ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದ್ದರಿಂದ ಚುನಾವಣೆ ವಿಳಂಬವಾಗಿತ್ತು. ಈ ನಡುವೆ ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ(2020) ಅನುಸಾರ 243 ವಾರ್ಡ್ಗಳಿಗೆ ಬದಲಾಗಿ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ 2020ರ ಡಿಸೆಂಬರ್ 4ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.
ನಂತರ ರಾಜ್ಯ ವಿಧಾನಸಭೆಯು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ 243 ವಾರ್ಡ್ಗಳಿಗೆ ಚುನಾವಣೆ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಿತ್ತು. ಅಲ್ಲದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸರ್ಕಾರ ಸಲ್ಲಿಸಿತ್ತು.