‘ನಾಳೆ ಬನ್ನಿ’ ಸಬೂಬು ನೀಡಬೇಡಿ, ಕೂಡಲೇ ಪ್ರವಾಹ  ನೆರವು ಬಿಡುಗಡೆ ಮಾಡಿ: ಬಸವರಾಜ ಬೊಮ್ಮಾಯಿ

ಯಾವುದೇ ಅಧಿಕಾರಿಗಳು ‘ನಾಳೆ ಬನ್ನಿ’ ಎಂಬ ಸಬೂಬು ನೀಡಬಾರದು. ಬೆಳೆ ನಷ್ಟದ ಸಮೀಕ್ಷೆ ವರದಿಗಳನ್ನು ವಿಳಂಬ ಮಾಡದೆ ಶ್ರದ್ಧೆಯಿಂದ ಸಲ್ಲಿಸಬೇಕು' ಎಂದು ಸೂಚಿಸಿದ್ದಾರೆ.

Published: 22nd May 2022 09:35 AM  |   Last Updated: 22nd May 2022 09:35 AM   |  A+A-


Basavaraja bommai

ಬಸವರಾಜ ಬೊಮ್ಮಾಯಿ

The New Indian Express

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಶನಿವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು ಮತ್ತು ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಮಳೆಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಡಿಸಿಗಳು, ಸಹಾಯಕ ಆಯುಕ್ತರು ಮತ್ತು ಕೃಷಿ ಅಧಿಕಾರಿಗಳು ಇನ್ನೆರಡು ಮೂರು ದಿನಗಳಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಮತ್ತು 72 ಗಂಟೆಗಳಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮಾರ್ಗಸೂಚಿಯಂತೆ ಕೂಡಲೇ ಕಂದಾಯ, ಆರ್‌ಡಿಪಿಆರ್ ಮತ್ತು ಸಣ್ಣ ನೀರಾವರಿ ಇಲಾಖೆಗಳು ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದ ಕಡತಗಳನ್ನು ತೆರವುಗೊಳಿಸಬೇಕು ಎಂದು ಅವರು
ಅವರಿಗೆ ತಿಳಿಸಿದರು.

ಯಾವುದೇ ಅಧಿಕಾರಿಗಳು ‘ನಾಳೆ ಬನ್ನಿ’ ಎಂಬ ಸಬೂಬು ನೀಡಬಾರದು. ಬೆಳೆ ನಷ್ಟದ ಸಮೀಕ್ಷೆ ವರದಿಗಳನ್ನು ವಿಳಂಬ ಮಾಡದೆ ಶ್ರದ್ಧೆಯಿಂದ ಸಲ್ಲಿಸಬೇಕು' ಎಂದು ಸೂಚಿಸಿದ್ದಾರೆ.

ತುರ್ತು ಕಾಮಗಾರಿಗೆ ಅಡ್ಡಿಯಾಗದಂತೆ ಮುಂದಿನ 15 ದಿನಗಳ ಕಾಲ ಅಧಿಕಾರಿಗಳಿಗೆ ರಜೆ ನೀಡಬಾರದು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಕಾಮಗಾರಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬೆಳೆ ನಷ್ಟ ಹಾಗೂ ಮನೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಮೂರು ದಿನಗಳೊಳಗೆ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಬಳಿಕ ಮುಖ್ಯ ಕಾರ್ಯದರ್ಶಿಯವರಿಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳ ವೈಯಕ್ತಿಕ (ಪಿ.ಡಿ) ಖಾತೆಯಲ್ಲಿ 728.85 ಕೋಟಿ ಲಭ್ಯವಿದ್ದು, ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು
ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಾಕೀತು ಮಾಡಿದರು.

ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಜನರನ್ನು ಸ್ಥಳಾಂತರಿಸುವ ಮೂಲಕ ಸಾವು, ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.


Stay up to date on all the latest ರಾಜ್ಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp