ಉಡುಪಿ: ಸುಟ್ಟುಹೋದ ಕಾರಿನಲ್ಲಿ ಬೆಂಗಳೂರು ಮೂಲದ ಪ್ರೇಮಿಗಳ ಶವ ಪತ್ತೆ
ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾಗಿರುವ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್, ಜ್ಯೋತಿ ಮೃತರು ಎಂದು ತಿಳಿದುಬಂದಿದೆ.
Published: 22nd May 2022 12:18 PM | Last Updated: 22nd May 2022 12:18 PM | A+A A-

ಹೊತ್ತಿ ಉರಿಯುತ್ತಿರುವ ಕಾರು
ಉಡುಪಿ: ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾಗಿರುವ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್, ಜ್ಯೋತಿ ಮೃತರು ಎಂದು ತಿಳಿದುಬಂದಿದೆ.
ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಯಶವಂತ ಯಾದವ್ ಹಾಗೂ ಜ್ಯೋತಿ ನಾಪತ್ತೆ ಕೇಸು ದಾಖಲಾಗಿತ್ತು.
ಮೃತರು ಈಚೆಗೆ ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ ಕಾರು ಬಾಡಿಗೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾರು ಬೆಂಕಿಗಾಹುತಿಯಾಗಿದ್ದನ್ನು ಕಂಡು ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಇಬ್ಬರ ಶವ ಪತ್ತೆಯಾಗಿದೆ. ಬ್ರಹ್ಮಾವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಗೂ ಮುನ್ನ ಕುಟುಂಬಸ್ಥರಿಗೆ ಮೆಸೇಜ್ ಮಾಡಿರುವುದಾಗಿ ತಿಳಿದು ಬಂದಿದೆ. ಜ್ಯೋತಿ ಒಂದು ವರ್ಷದ ಹಿಂದೆ ಬಿ.ಕಾಂ ಮುಗಿಸಿದ್ದಳು ಎಂದು ತಿಳಿದು ಬಂದಿದೆ.