ವಾಸ್ತವ ಸಂಗತಿ ಹೊರತರುವ ಪ್ರಯತ್ನ: ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡ ಸರ್ಕಾರ

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್, ಜನರು ಮತ್ತು ವಿದ್ಯಾರ್ಥಿಗಳಲ್ಲಿ ಅನಗತ್ಯವಾಗಿ ಗೊಂದಲವನ್ನು ಸೃಷ್ಟಿಸಲಾಗುತ್ತಿದೆ, ಜೊತೆಗೆ ಸುಳ್ಳು ಹರಡುವ ಮೂಲಕ ಕೋಮು ದ್ವೇಷವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

Published: 24th May 2022 01:01 AM  |   Last Updated: 24th May 2022 01:08 PM   |  A+A-


Nagesh1

ಶಿಕ್ಷಣ ಸಚಿವ ಬಿ.ಸಿ. ನಾಗೇಶ್

The New Indian Express

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್, ಜನರು ಮತ್ತು ವಿದ್ಯಾರ್ಥಿಗಳಲ್ಲಿ ಅನಗತ್ಯವಾಗಿ ಗೊಂದಲವನ್ನು ಸೃಷ್ಟಿಸಲಾಗುತ್ತಿದೆ, ಜೊತೆಗೆ ಸುಳ್ಳು ಹರಡುವ ಮೂಲಕ ಕೋಮು ದ್ವೇಷವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

ಹಿಂದಿನ ಇತಿಹಾಸ ಪುಸ್ತಕಗಳಿಂದ ಕೆಲವು ಉದ್ದೇಶಗಳಿಗೆ ಅನುಗುಣವಾಗಿ ಸತ್ಯಗಳನ್ನು ತಿರುಚಲಾಗಿದೆ ಅಥವಾ ಮರೆಮಾಡಲಾಗಿದೆ ಎಂದು ಆರೋಪಿಸಿದ ಅವರು, ನಿಜವಾದ ಸಂಗತಿಗಳನ್ನು ಹೊರಹಾಕುವ ಪ್ರಯತ್ನಗಳು ನಡೆಯುತ್ತಿರುವಾಗ ಸ್ವಯಂಘೋಷಿತ ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಮತ್ತು ಕಾಂಗ್ರೆಸ್ ನಾಯಕರಿಗೆ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 ಶಿಕ್ಷಣ ಇಲಾಖೆ ಸುಗಮವಾಗಿ ನಡೆಯುತ್ತಿರುವುದನ್ನು ಅರಗಿಸಿಕೊಳ್ಳಲಾಗದವರು ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವರದಿ ಬರುವ ಮುನ್ನವೇ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ಕೈಬಿಡಲಾಗುತ್ತಿದೆ ಎಂಬ ವದಂತಿ ಆರಂಭವಾಯಿತು. ನಂತರ ಪುಸ್ತಕ ಮುದ್ರಣಕ್ಕೆ ಹೋದಾಗ  ಭಗತ್ ಸಿಂಗ್ ಬಗ್ಗೆ ಪಾಠವನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ ಎಂದು ನಾಗೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣ, ನಾರಾಯಣ ಗುರುಗಳ ಅಧ್ಯಾಯಗಳನ್ನು ಕೈಬಿಡಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ಹರಡಲಾಗಿತ್ತು. ಇದೀಗ ಕುವೆಂಪು ಅವರ ಬಗ್ಗೆ ಸತ್ಯವನ್ನು ತಿರುಚಲಾಗುತ್ತಿದೆ ಆರೋಪಿಸಲಾಗಿದೆ ಎಂದರು. 

ಈ ಹಿಂದೆ ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕೆಲವು ಅಧ್ಯಾಯಗಳನ್ನು ಕೈಬಿಟ್ಟಾಗ ಯಾರೂ ಪ್ರಶ್ನಿಸಲಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು,  ಕೋಮು ದ್ವೇಷ ಸೃಷ್ಟಿಸುವ ಯತ್ನದ ಜತೆಗೆ ಜನರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು. 

ಇದನ್ನೂ ಓದಿ: ಹೆಡಗೇವಾರ್ ಭಾಷಣ ಪಠ್ಯಪುಸ್ತಕದಲ್ಲಿ ಇರಲಿದೆ: ಬಿ.ಸಿ.ನಾಗೇಶ್; ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಇಲಾಖೆ ಸ್ಪಷ್ಟನೆ

ನಾರಾಯಣ ಗುರುಗಳ ಕುರಿತ ಅಧ್ಯಾಯ ಕೈಬಿಟ್ಟಿರುವ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಸಿದ್ದರಾಮಯ್ಯನವರ ಆಡಳಿತಾವಧಿಯಿಂದಲೂ ಸಿಲಬಸ್ ಪೂರ್ಣವಾಗದೆ 10ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿರುವ ಬಗ್ಗೆ ಶಿಕ್ಷಕರಿಂದ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ನಾರಾಯಣ ಗುರುಗಳ ಅಧ್ಯಾಯವನ್ನು ಇತಿಹಾಸದ ಪಠ್ಯ ಪುಸ್ತಕದಿಂದ ತೆಗೆದು ಆರನೇ ತರಗತಿಯ ಪಠ್ಯಪುಸ್ತಕದಲ್ಲಿ ಹಾಗೆಯೇ ಉಳಿಸಿಕೊಂಡಿವೆ ಎಂದು ಅವರು ಹೇಳಿದರು. 

 ಕನ್ನಡ ಪುಸ್ತಕದಲ್ಲಿ ಯಥಾವತ್ತಾಗಿ ಸೇರಿಸಿದ್ದೇವೆ, 6ನೇ ತರಗತಿಯ ಪಠ್ಯದಲ್ಲಿ ನಾರಾಯಣ ಗುರುಗಳ ಅಧ್ಯಾಯ ಹಾಗೆಯೇ ಉಳಿದುಕೊಂಡಿದೆ ಎಂದು ಹಿರಿಯ ರಾಜಕಾರಣಿಗಳೂ ಆರಂಭಿಸಿದ್ದನ್ನು ಗಮನಿಸಿದರು. ಪಠ್ಯಪುಸ್ತಕವನ್ನು ಪರಿಶೀಲಿಸದೆ ಅಥವಾ ಸತ್ಯವನ್ನು ತಿಳಿದುಕೊಳ್ಳದೆ ಈ ಸುಳ್ಳುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಾರೆ.

ಭಗತ್ ಸಿಂಗ್ ಅಧ್ಯಾಯವನ್ನು ತೆಗೆದುಹಾಕಲಾಗಿಲ್ಲ ಎಂದು ಹೇಳಿದ ನಾಗೇಶ್, ಚಂದ್ರಶೇಖರ್ ಆಜಾದ್, ಸುಖದೇವ್ ಮತ್ತು ರಾಜಗುರು ಅವರಂತಹ ಇತರ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಷ್ಕೃತ ಪಠ್ಯಪುಸ್ತಕದಲ್ಲಿ ಸೇರಿಸಲಾಗಿದೆ.


Stay up to date on all the latest ರಾಜ್ಯ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp