ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ, ರಾಜ್ಯದಲ್ಲಿ 50,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ
ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
Published: 24th May 2022 07:39 PM | Last Updated: 24th May 2022 07:49 PM | A+A A-

ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖದಲ್ಲಿ ಹೂಡಿಕೆ ಒಪ್ಪಂದ
ಬೆಂಗಳೂರು: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರ್ತಿ ಎಂಟರ್ ಪ್ರೈಸಸ್ ನ ಸಿಇಒ ಸುನೀಲ್ ಭಾರ್ತಿ ಮಿತ್ತಲ್ ಮತ್ತಿತರನ್ನು ಭೇಟಿಯಾದ ಮುಖ್ಯಮಂತ್ರಿ, ರಾಜ್ಯದಲ್ಲಿನ ಹೂಡಿಕೆ ಅವಕಾಶ ಕುರಿತಂತೆ ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿತು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ ಸಚಿವ ಡಾ.ಸಿ. ಎನ್. ಅಶ್ವತ್ಥ ನಾರಾಯಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ @BSBommai ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು.
— CM of Karnataka (@CMofKarnataka) May 24, 2022
1/2 pic.twitter.com/V0fnWmBr78
ಭಾರ್ತಿ ಎಂಟರ್ ಪ್ರೈಸಸ್ ರಾಜ್ಯದಲ್ಲಿ ಮೆಗಾ ಡಾಟಾ ಸೆಂಟರ್ ಸ್ಥಾಪನೆಗೆ ಯೋಜಿಸಿದ್ದು, ಸರ್ಕಾರದಿಂದ ಸಂಪೂರ್ಣ ಸಹಕಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
I am happy to share that #Bharti Enterprises plans to set up a mega #DataCentre in the state. The Govt. of #Karnataka has assured complete support for the project. #WEF2022 #WorldEconomicForum #KarnatakaAtDavos #BuildForTheWorld @airtelnews pic.twitter.com/CRcZcl28MK
— Basavaraj S Bommai (@BSBommai) May 24, 2022