ಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಎನ್‌ಎಚ್‌ಎಐಗೆ ಭೂಮಿ ನೀಡಲು ಅರಣ್ಯ ಇಲಾಖೆ ನಿರಾಕರಣೆ
ಕನಕಪುರ ರಸ್ತೆ-ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ (ಬಿಎನ್‌ಪಿ) ಸಾವನದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಆನೆಗಳ ಹಾವಳಿ ಹೆಚ್ಚುತ್ತಿದ್ದು, ಹೀಗಾಗಿ ರಸ್ತೆ ಅಗಲೀಕರಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆಯು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ತಿಳಿಸಿದೆ.
Published: 25th May 2022 01:35 PM | Last Updated: 25th May 2022 01:56 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕನಕಪುರ ರಸ್ತೆ-ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ (ಬಿಎನ್‌ಪಿ) ಸಾವನದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಆನೆಗಳ ಹಾವಳಿ ಹೆಚ್ಚುತ್ತಿದ್ದು, ಹೀಗಾಗಿ ರಸ್ತೆ ಅಗಲೀಕರಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆಯು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ತಿಳಿಸಿದೆ.
ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡುವುದು ಪರಿಹಾರವಲ್ಲ. ರಸ್ತೆ ಅಗಲೀಕರಣ ವೇಳೆ ಸಂಚಾರ ದಟ್ಟಣೆ ಎದುರಾಗಲಿದ್ದು, ಈ ವೇಳೆ ಮಾನವ-ಪ್ರಾಣಿ ಸಂಘರ್ಷ ಎಂದುರಾದರೆ ಸಮಸ್ಯೆಗಳಾಗುತ್ತವೆ ಎಂದು ಅರಣ್ಯ ಸಿಬ್ಬಂದಿಗಳು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ತೆರೆ: ಆರ್.ಅಶೋಕ್
ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌ಎಸ್ ರವಿಶಂಕರ್ ಅವರು ಮಾತನಾಡಿ, ಎರಡು ತಿಂಗಳಿನಿಂದ ಎನ್‌ಎಚ್‌ಎಐಗೆ ಭೂಮಿಯನ್ನು ಹಸ್ತಾಂತರಿಸಲು ನಿರಾಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪರಿಶೀಲನಾ ಸಭೆಯಲ್ಲಿ ಮೈಸೂರು ರಸ್ತೆ ಮತ್ತು ಕನಕಪುರ ರಸ್ತೆಯ ಬಗ್ಗೆಯೂ ಅವರು ಕಾಳಜಿ ವಹಿಸಬೇಕು ಎಂದು ತಿಳಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಲು ಪತ್ರವನ್ನೂ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ವಿವಾದದಲ್ಲಿರುವ ರಸ್ತೆಗಳು ಕೂಡ ಆನೆ ಕಾರಿಡಾರ್‌ನ ಒಂದು ಭಾಗವಾಗಿದ್ದು, ವಿವಿಧ ನ್ಯಾಯಾಲಯಗಳ ಆದೇಶದಂತೆ ಅವುಗಳನ್ನು ರಕ್ಷಿಸಬೇಕಾಗಿದೆ ಎಂದು ಮತ್ತೊಬ್ಬ ಅರಣ್ಯ ಅಧಿಕಾರಿ ಹೇಳಿದ್ದಾರೆ
ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಆನೆ ಸಾವು: ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ
ಎನ್‌ಎಚ್‌ಎಐ ಪ್ರಾದೇಶಿಕ ಮುಖ್ಯಸ್ಥ ಮಧುಕರ್ ವಾಥೋರ್ ಅವರು ಮಾತನಾಡಿ, ಈ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿಂದೆ ಗುತ್ತಿಗೆದಾರರೊಂದಿಗೆ ಹಣಕಾಸಿನಿಂದಾಗಿ ಸಮಸ್ಯೆಗಳು ಎದುರಾಗಿತ್ತು. ಹೀಗಾಗಿ ಕೆಲವು ಯೋಜನೆಗಳನ್ನು ತಡೆಹಿಡಿಯಲಾಗಿತ್ತು. ನೈಸ್ ರಸ್ತೆ ಮತ್ತು ಕನಕಪುರ ರಸ್ತೆ, ನೈಸ್ ರಸ್ತೆ ಮತ್ತು ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ರಸ್ತೆ ಅಗಲೀಕರಣ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಕನಕಪುರ ರಸ್ತೆಯಲ್ಲಿ ವೇಗವಾಗಿ ಬಂದ ಬಿಎಂಟಿಸಿ ಬಸ್'ವೊಂಡು ಆನೆಗೆ ಡಿಕ್ಕಿ ಹೊಡೆದಿತ್ತು. ಘಟನೆ ಬಳಿಕ ಈ ವಿಚಾರ ಮಹತ್ವ ಪಡೆದುಕೊಂಡಿದೆ.