'ಎಣ್ಣೆ' ಪ್ರಿಯರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರದಲ್ಲೇ ಮದ್ಯದ ದರ ಕಡಿತ ಸಾಧ್ಯತೆ
ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯದ ಬೆಲೆ ಅಗ್ಗವಾಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು...
Published: 26th May 2022 03:22 PM | Last Updated: 26th May 2022 06:23 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯದ ಬೆಲೆ ಅಗ್ಗವಾಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು ಕಡಿಮೆ ಮಾಡಲು ಯೋಜಿಸುತ್ತಿದೆ. ಇದರಿಂದ ಮದ್ಯ ಮಾರಾಟ ಹೆಚ್ಚಳವಾಗುವ ನಿರೀಕ್ಷೆಯೊಂದಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಆದಾಯದ ಮೇಲೆ ಕಣ್ಣಿಟ್ಟಿದೆ.
2021-22ರಲ್ಲಿ ಮದ್ಯದಿಂದ 24,580 ಕೋಟಿ ರೂ. ಆದಾಯ ಸಂಗ್ರಹ ಗುರಿ ನೀಡಲಾಗಿತ್ತು. ಆದರೆ ಗುರಿ ಮೀರಿ 26,276.83 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಈ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಜೆಟ್ನಲ್ಲಿ 2022-23ನೇ ಸಾಲಿನಲ್ಲಿ 29,000 ರೂ. ಆದಾಯ ಸಂಗ್ರಹ ಗುರಿ ನೀಡಿದ್ದಾರೆ.
ಇದನ್ನು ಓದಿ: ಮದ್ಯದಂಗಡಿ ಪರವಾನಗಿ ನವೀಕರಣಕ್ಕೆ ಲಂಚ: ಎಸಿಬಿ ಬಲೆಗೆ ಅಬಕಾರಿ ಡಿಸಿ ನಾಗಶಯನ
ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಜತೆ ಮಾತನಾಡಿದ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು, ಕರ್ನಾಟಕದಲ್ಲಿ ದುಬಾರಿ ಮದ್ಯದ ಬೆಲೆಯನ್ನು ಕಡಿಮೆ ಮಾಡುವ ಬಗ್ಗೆ ಯೋಚಿಸಲಾಗುತ್ತಿದೆ. ಇದಕ್ಕಾಗಿ ಐದು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಮಹಾರಾಷ್ಟ್ರ, ತೆಲಂಗಾಣ, ಕೇರಳ, ದೆಹಲಿ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ, ದುಬಾರಿ ಮದ್ಯದ ಬೆಲೆಗಳು ಮತ್ತು ಅಬಕಾರಿ ಸುಂಕದ ಸ್ಲ್ಯಾಬ್ಗಳನ್ನು ಅಧ್ಯಯನ ಮಾಡಲಿವೆ. ''ಜೂನ್ ಮೊದಲ ವಾರದಲ್ಲಿ ವಿಧಾನಪರಿಷತ್ ಸದಸ್ಯರ ಚುನಾವಣೆ ನಂತರ ಅಧ್ಯಯನ ಮಾಡುತ್ತೇವೆ ಎಂದಿದ್ದಾರೆ.
ಅಬಕಾರಿ ಇಲಾಖೆಯ ಮೂಲಗಳ ಪ್ರಕಾರ, ಕರ್ನಾಟಕದಲ್ಲಿ ಮದ್ಯದಿಂದ ದಿನಕ್ಕೆ ಸರಾಸರಿ 75 ಕೋಟಿ ರೂಪಾಯಿ ಆದಾಯ ಸಂಗ್ರಹವಾಗುತ್ತಿದೆ.
ಕರ್ನಾಟಕವು ಮದ್ಯದ ಬಳಕೆಯಲ್ಲಿ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಆದರೆ ಅಬಕಾರಿ ಸುಂಕ ದೇಶದಲ್ಲಿಯೇ ಅತಿ ಹೆಚ್ಚು ವಿಧಿಸುತ್ತಿರುವುದರಿಂದ ಆದಾಯ ಕಡಿಮೆಯಾಗಲು ಕಾರಣವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.