ಮಕ್ಕಳು ಸಂವಿಧಾನ ಕಲಿಯಲು ಪರ್ಯಾಯ ಪಠ್ಯ ಪುಸ್ತಕ ತಯಾರಿಸುತ್ತೇವೆ: ದೇವನೂರು ಮಹಾದೇವ
ಆರ್'ಎಸ್ಎಸ್ ರ್ಕಾರ ಶಾಲಾ ಮಕ್ಕಳಿಗೆ ಏನು ಕಲಿಸಬೇಕೊ ಕಲಿಸಲಿ ನಾವು ಪರ್ಯಾಯವಾಗಿ ಸಂವಿಧಾನದ ಪೀಠಿಕೆ, ಆಶಯಗಳು ಸೇರಿದಂತೆ ಅನೇಕ ವಿಚಾರಗಳನ್ನು ತಿಳಿಸುವ ಕೆಲಸ ಮಾಡುತ್ತೇವೆ' ಎಂದು ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರು ಮಹಾದೇವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published: 26th May 2022 09:31 AM | Last Updated: 26th May 2022 01:28 PM | A+A A-

ದೇವನೂರು ಮಹಾದೇವ
ಮೈಸೂರು: ಆರ್'ಎಸ್ಎಸ್ ರ್ಕಾರ ಶಾಲಾ ಮಕ್ಕಳಿಗೆ ಏನು ಕಲಿಸಬೇಕೊ ಕಲಿಸಲಿ ನಾವು ಪರ್ಯಾಯವಾಗಿ ಸಂವಿಧಾನದ ಪೀಠಿಕೆ, ಆಶಯಗಳು ಸೇರಿದಂತೆ ಅನೇಕ ವಿಚಾರಗಳನ್ನು ತಿಳಿಸುವ ಕೆಲಸ ಮಾಡುತ್ತೇವೆ' ಎಂದು ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರು ಮಹಾದೇವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಠ್ಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆಯಿಂದ ಆಗಿರುವ ತಪ್ಪುಗಳನ್ನು ಸರಿಪಡಿಸಲು, ಮಕ್ಕಳು ಪ್ರಜಾಸತ್ತಾತ್ಮಕವಾಗಿ ಬೆಳೆಯಲು, ಸಂವಿಧಾನದ ಆಶಯಗಳನ್ನು ತಿಳಿಯಲು ಪರ್ಯಾಯವಾಗಿ ಕಾರ್ಯಕ್ರಮ ರೂಪಿಸಲಾಗುತ್ತದೆ. ಮಕ್ಕಳು ಈಗಾಗಲೇ ಬಳಸುತ್ತಿರುವ ವ್ಯಾಟ್ಸಾಪ್, ಫೇಸ್ಬುಕ್ ಮೂಲಕ ಪಠ್ಯ ಪರಿಷ್ಕರಣೆಯಲ್ಲಾಗಿರುವ ತಪ್ಪುಗಳನ್ನು ಸರಿಪಡಿಸುತ್ತೇವೆ. ವಿದ್ಯಾರ್ಥಿಗಳು ಸಂವಿಧಾನವನ್ನು ಮರೆಯುತ್ತಿದ್ದಾರೆ. ಭವಿಷ್ಯದ ಪೀಳಿಗೆ ಮೂಢನಂಬಿಕೆಗಳಿಗೆ ಜೋತು ಬೀಳದೆ ವೈಜ್ಞಾನಿಕ ಮನೋಭಾವನೆಯನ್ನು ಹೊಂದಿ ಜಾತ್ಯಾತೀತವಾಗಿರಬೇಕು. ಸಂವಿಧಾನದ ಪ್ರಸ್ತಾವನೆಯನ್ನು ಹಾಡು ಕಟ್ಟಿ ಹಾಡಲಿದ್ದೇವೆ. ತಜ್ಞರ ಮೂಲಕ ಉಪನ್ಯಾಸ ಏರ್ಪಡಿಸುತ್ತೇವೆ. ಕಮ್ಮಟ ಮಾಡಿ ಪ್ರಶ್ನಿಸುವ, ವೈಜ್ಞಾನಿಕ ಮನೋಭಾವ ಬೆಳೆಸಲಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಪುಸ್ತಕಗಳು ಮುದ್ರಣವಾಗಿದ್ದು ಪಾಠ ಬಿಡಲು ಸಾಧ್ಯವಿಲ್ಲ, ದೇವನೂರು ಭೇಟಿಯಾಗಿ ಮನವೊಲಿಸುವೆ: ಸಚಿವ ಬಿಸಿ. ನಾಗೇಶ್
'ತನ್ನ ಪಠ್ಯವನ್ನು ಕೈ ಬಿಡುವಂತೆ ತಿಳಿಸಿದ್ದೇನೆ. ಪಠ್ಯ ಪುಸ್ತಕ ಈಗಾಗಲೇ ಮಕ್ಕಳ ಕೈ ಸೇರಿದ್ದರೆ ಬೋಧಿಸದಂತೆ ಶಿಕ್ಷಕರಿಗೆ ಸೂಚಿಸಬೇಕು ಎಂದು ತಿಳಿಸಿದರು.