ಬಾಗಲಕೋಟೆ: ಟೋಪಿ ಧರಿಸಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗೆ ಥಳಿತ, ಏಳು ಜನರ ವಿರುದ್ಧ ಎಫ್ ಐಆರ್ ದಾಖಲು
ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ.
Published: 29th May 2022 04:30 PM | Last Updated: 29th May 2022 08:01 PM | A+A A-

ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ.
ತೆರೆದಾಳ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ನವೀದ್ ಹಸನಾಸಾಬ್ ತರಾತರಿ ನೀಡಿದ್ದ ದೂರಿನ ಆಧಾರದ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ನಿರ್ದೇಶನದಂತೆ ಸಬ್ ಇನ್ಸ್ ಪೆಕ್ಟರ್ ಮತ್ತಿತರ ಐವರು ಪೊಲೀಸರ ವಿರುದ್ಧ ಮೇ 24 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಎಫ್ ಐಆರ್ ಪ್ರಕಾರ, ಈ ವರ್ಷದ ಫೆಬ್ರವರಿಯಲ್ಲಿ ಈ ಘಟನೆ ನಡೆದಿದೆ.
ಕಾಲೇಜ್ ಒಳಗಡೆ ಟೋಫಿ ಧರಿಸುವುದಕ್ಕೆ ಸರ್ಕಾರದ ಆದೇಶವಿಲ್ಲದಿದ್ದರೂ ಟೋಫಿ ಧರಿಸಿ ಕಾಲೇಜ್ ಗೆ ಹೋಗಿದ್ದಕ್ಕೆ ಪ್ರಿನ್ಸಿಪಾಲ್ ಪ್ರವೇಶ ನೀಡಲಿಲ್ಲ ಹಲ್ಲೆಗೊಳಗಾದ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾನೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೂಡಾ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ನಂಬಿಕೆಯನ್ನು ಅಪಮಾನಿಸಿದ್ದಾನೆ ಎಂದು ಆರೋಪಿಸಿದ್ದಾನೆ. ಏತನ್ಮದೆ ಈ ವಿಚಾರದ ಬಗ್ಗೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.