ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಪ್ರಯತ್ನ, 15 ಜನರ ಬಂಧನ

ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದರೆ, ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸಿಪಿ ಎ ಶ್ರೀನಿವಾಸಲು
ಡಿಸಿಪಿ ಎ ಶ್ರೀನಿವಾಸಲು

ಕಲಬುರಗಿ: ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದರೆ, ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಧ್ವಜಾರೋಹಣ ಮಾಡಲು ಯತ್ನಿಸಿದ  ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂಎಸ್ ಪಾಟೀಲ್ ಸೇರಿದಂತೆ ಹಲವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ  ಎಂದು ಡಿಸಿಪಿ ಎ.ಶ್ರೀನಿವಾಸಲು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 371 ಜೆ ವಿಧೇಯಕ ಜಾರಿಗೊಳಿಸಿದ್ದರೂ ರಾಜಕೀಯ ಇಚ್ಛಾಶಕ್ತಿ ಕೊರತೆ, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯಿಂದ ಈ ಭಾಗದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ಯಾಯ ಮುಂದುವರೆದಿದೆ ಎಂದು ಅವರು ಆರೋಪಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಟ್ಟ ಹಣ ಪಕ್ಕದ ಜಿಲ್ಲೆಗಳಿಗೆ ಬಳಕೆ ಮಾಡಲಾಗುತ್ತಿದೆ. ನಮ್ಮ ಭಾಗದ ಸಮಗ್ರ ಅಭಿವೃದ್ಧಿಗಾಗಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com