ಕರ್ನಾಟಕ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದೆ: ಡಿಕೆ ಶಿವಕುಮಾರ್

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾದ ಅನುದಾನಿತ ಆಹಾರ ಕ್ಯಾಂಟೀನ್‌ (ಇಂದಿರಾ ಕ್ಯಾಂಟೀನ್)ಗಳನ್ನು ರಾಜ್ಯ ಸರ್ಕಾರ ಮುಚ್ಚುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಸೋಮವಾರ ಆರೋಪಿಸಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾದ ಅನುದಾನಿತ ಆಹಾರ ಕ್ಯಾಂಟೀನ್‌ (ಇಂದಿರಾ ಕ್ಯಾಂಟೀನ್)ಗಳನ್ನು ರಾಜ್ಯ ಸರ್ಕಾರ ಮುಚ್ಚುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, 'ಸರ್ಕಾರ 40 ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದೆ ಮತ್ತು ಎಲ್ಲಿ ಮುಚ್ಚಿದರೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು ಎಂದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, 'ಆಟೋರಿಕ್ಷಾ ಚಾಲಕರು, ಕೂಲಿ ಕಾರ್ಮಿಕರು, ಬಡವರಿಗೆ 10 ರೂ.ಗೆ ಊಟ ಸಿಗುತ್ತದೆ ಎಂಬ ಕಾರಣಕ್ಕೆ ಕ್ಯಾಂಟೀನ್‌ಗಳನ್ನು ಸರ್ಕಾರ ಮುಚ್ಚಬಾರದು. ಬಿಜೆಪಿ ಸರ್ಕಾರ ತನ್ನ ಕಾರ್ಯಕ್ರಮಗಳನ್ನು ಪ್ರಾರಂಭಿಸಬಹುದು ಮತ್ತು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಾರಂಭಿಸಿದ ಯಾವುದೇ ಜನಪರ ಕಾರ್ಯಕ್ರಮಗಳನ್ನು ನಿಲ್ಲಿಸಬಾರದು ಎಂದು ಹೇಳಿದರು.

'ಇಂದಿರಾ ಕ್ಯಾಂಟೀನ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು. ಅವುಗಳನ್ನು ಮುಚ್ಚುವುದನ್ನು ವಿರೋಧಿಸಿ ನಾವು ಎಲ್ಲಾ ಜಿಲ್ಲಾಧ್ಯಕ್ಷರಿಂದ ವರದಿ ಮತ್ತು ವಿವರಗಳನ್ನು ಪಡೆಯುತ್ತೇವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವರದಿಯಾದ ಪ್ರಕರಣಗಳು ಸೇರಿದಂತೆ ಎಲ್ಲಾ ಪ್ರಕರಣಗಳ ತನಿಖೆಗೆ ಸಮಿತಿಯನ್ನು ರಚಿಸುವಂತೆ ಅವರು ಸವಾಲು ಹಾಕಿದರು. ಅಂತೆಯೇ ಬೆಂಗಳೂರಿನ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಲ್ಲಿ ವಿಫಲವಾಗಿದೆ ಎಂದು ಶಿವಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಶಿವಕುಮಾರ್ ಅವರು, 'ಬೆಂಗಳೂರಿನ ಕಗ್ಗದಾಸಪುರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾರತದ ಉಕ್ಕಿನ ಮಹಿಳೆಗೆ ಗೌರವ ಸಲ್ಲಿಸಿದೆ. ರೋಟಿ, ಕಪಡಾ, ಮಕಾನ್‌ ಎಂಬುದು ಶ್ರೀಮತಿ ಇಂದಿರಾಗಾಂಧಿ ಅವರ ಮೂರು ಮುಖ್ಯ ಗುರಿಗಳಾಗಿದ್ದವು'.

'ದೇಶದ ಬಡ ವರ್ಗದವರ ಪರ ಅಪಾರ ಕಾಳಜಿ ಹೊಂದಿದ್ದ ಅವರು ಅವರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದರು. ಕಾಂಗ್ರೆಸ್‌ ಪಕ್ಷ ಇದಕ್ಕಾಗಿ ಇಂದಿರಾ ಕ್ಯಾಂಟೀನ್‌ ಅನ್ನು ಆರಂಭಿಸಿತು. ದುರಾದೃಷ್ಟವಶಾತ್‌ ಬಿಜೆಪಿ ಸರ್ಕಾರ 40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ ಹಾಕಿದೆ. ಹಲವು ಕ್ಯಾಂಟೀನ್‌ಗಳಿಗೆ ನಿಗದಿತ ಅವಧಿಗೆ ಅನುದಾನ ತಲುಪುತ್ತಿಲ್ಲ. ಪ್ರತೀ ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್‌ ಸ್ಥಿತಿಗತಿಗಳ ಕುರಿತು ವರದಿ ಪಡೆದಿದ್ದೇನೆ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಇಂದಿರಾ ಕ್ಯಾಂಟೀನ್‌ ಮುಂದೆ ಧರಣಿ ನಡೆಸಬೇಕು ಎಂದು ಕರೆ ನೀಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com