ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿದ ಸರ್ಕಾರ:  ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿರುವ ರಾಜ್ಯ ಸರ್ಕಾರ, 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿರುವ ರಾಜ್ಯ ಸರ್ಕಾರ, 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ವಿವಾದಕ್ಕೆ ಸಿಲುಕಿದ್ದ ಬೆಂಗಳೂರಿನ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿನ ಕೆಎಸ್ಆರ್'ಪಿಗೆ ವರ್ಗಾವಣೆ ಮಾಡಿದೆ. ಐಪಿಎಸ್ ಅಧಿಕಾರಿ ಮಾಲಿನಿ ಕೃಷ್ಣಮೂರ್ತಿಯವರನ್ನು ಬೆಂಗಳೂರಿನ ಆಂತರೀಕ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಿದೆ.

ಕೆಎಸ್ಆರ್'ಪಿಯ ಎಡಿಜಿಪಿ ರವಿ ಎಸ್ ಅವರನ್ನು ಬೆಂಗಳೂರಿನ ಪೊಲೀಸ್ ಅಂಡ್ ಪ್ರಿನ್ಸಿಪಲ್ ಸೆಕ್ರಟೆರಿ ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಜಯ್ ಹೀಲೋರಿವರನ್ನು  ಡಿಸಿಆರ್‌ಇಯ ಎಸ್ಪಿಯಾಗಿ ನೇಮಿಸಲಾಗಿದೆ.

ಇನ್ನುಳಿದಂತೆ ಎಸಿಬಿ ಪೊಲೀಸ್ ಅಧೀಕ್ಷಕರಾಗಿದ್ದ ಯತೀಶ್ ಚಂದ್ರ ಅವರನ್ನ ಡಿಸಿಪಿ-2 ಅಪರಾಧ ವಿಭಾಗಕ್ಕೆ, ಕಲಬುರಗಿ ಜಿಲ್ಲೆಯ ಎಸಿಬಿ ಎಸ್ಪಿ ಆಗಿದ್ದ ವೈ ಅಮರನಾಥ ರೆಡ್ಡಿ ಅವರನ್ನ ಗುಪ್ತಚರ ದಳದ ಅಧೀಕ್ಷಕರಾಗಿ, ಎಸಿಬಿ ಎಸ್ಪಿ ಆಗಿದ್ದ ಡಾ.ಶೋಭಾರಾಣಿ ಅವರನ್ನ ಬೆಂಗಳೂರಿನ ಬಿಎಂಟಿಎಫ್ ಆಗಿ, ಎಸಿಬಿ ಎಸ್ಪಿ ಆಗಿದ್ದ ವಿ.ಜಿ ಸುಜೀತ್, ಬಳ್ಳಾರಿ ಎಸಿಬಿ ಎಸ್ಪಿ ಆಗಿದ್ದ ಬಿ.ಎಲ್. ಶ್ರೀಹರಿ ಬಾಬು ಹಾಗೂ ವಿಜಯಪುರದ ಹೆಚ್ಚುವರಿ ಎಸ್ಪಿ ಆಗಿದ್ದ ರಾಮ್ ಎಲ್ ಅರಸಿದ್ದಿ ಅವರನ್ನ ಲೋಕಾಯುಕ್ತ ಎಸ್ಪಿ ಆಗಿ ವರ್ಗಾಯಿಸಿದರೆ, ಬೆಳಗಾವಿ ಎಸಿಬಿ ಎಸ್ಪಿ ಆಗಿದ್ದ ಬಾಬಸಾಬ್ ನೇಮಗೌಡ್ ಅವರನ್ನು ಬೆಳಗಾವಿ ಗುಪ್ತಚರ ದಳದ ಅಧೀಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com