ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ!

2022ರ ಸಾಲಿನಲ್ಲಿ ರಾಜ್ಯದ 67 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. 
ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು: 2022ರ ಸಾಲಿನಲ್ಲಿ ರಾಜ್ಯದ 67 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. 

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು 67 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. 

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ.

ಇನ್ನು ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ. ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರಿನ ರಾಮಕೃಷ್ಣ ಆಶ್ರಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಯಿತು.

ಸಾಧಕರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು. ಇನ್ನು ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ.

ಪ್ರಶಸ್ತಿ ಪುರಸ್ಕೃತರು:

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com